ಕೊರಗಜ್ಜ ದೈವದ ಕುರಿತ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಹಿಂದಿ ನಟ ಕಬೀರ್ ಬೇಡಿ
ಬೆಂಗಳೂರು: ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಗುರುತಿಸಿಕೊಂಡಿರುವ ನಟ ಕಬೀರ್ ಬೇಡಿ ಈಗ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ‘ಕರಿ ಹೈದ.. ಕರಿ ಅಜ್ಜ..’ ಚಿತ್ರದಲ್ಲಿ ಕಬೀರ್ ಬೇಡಿ ಬಣ್ಣ ಹಚ್ಚಲಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ‘ಕರಿ ಹೈದ.. ಕರಿ ಅಜ್ಜ..’ ಚಿತ್ರದಲ್ಲಿ ನಟಿಸಲು ಖುಷಿಯಾಗುತ್ತಿದೆ. ‘ಕೊರಗಜ್ಜ’ ದೈವದ ಕುರಿತ ಈ ಚಿತ್ರದಲ್ಲಿ ರಾಜನ ಪಾತ್ರದಲ್ಲಿ ನಟಿಸಿದ್ದೇನೆ. ಶ್ರುತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ ಎಂದು ಕಬೀರ್ […]
ಅಕ್ಟೋಬರ್ 28 ರಂದು ತೆರೆಗಪ್ಪಳಿಸಲಿದೆ ಗಂಧದ ಗುಡಿ: ಇದು ದೊಡ್ಮನೆ ಹುಡುಗ ಪುನೀತ್ ರಾಜ್ ಕುಮಾರ್ ಅವರ ಕೊನೆ ಚಿತ್ರ
ನಟ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಮೋಘವರ್ಷ ನಿರ್ದೇಶನದ ಸಾಕ್ಷ್ಯಚಿತ್ರ ಅಕ್ಟೋಬರ್ 28 ರಂದು ತೆರೆ ಮೇಲೆ ಬರಲಿದೆ. ಬಿಡುಗಡೆ ದಿನಾಂಕದ ಅಧಿಕೃತ ಪ್ರಕಟಣೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ. “ತನ್ನ ಮೇಲೆ ಅಪಾರ ಪ್ರೀತಿಯನ್ನು ಧಾರೆಯೆರೆದ ಭೂಮಿಗೆ ಗೌರವವಾಗಿ ಕರ್ನಾಟಕದ ಕಾಡುಗಳನ್ನು ಪುನೀತ್ ಆಗಿಯೇ ಅನ್ವೇಷಿಸುತ್ತಾರೆ. ಈ ಚಿತ್ರದಲ್ಲಿ ಚಿತ್ರಕಥೆಯಿಲ್ಲದ ನೈಜ ಪುನೀತ್ ಅವರನ್ನು ಅಭಿಮಾನಿಗಳು ಕಾಣಬಹುದು” ಎಂದು ಅಶ್ವಿನಿ ಹೇಳಿದ್ದಾರೆ. […]