ಕುಂದಾಪುರ: ಯಡ್ಯಾಡಿ-ಮತ್ಯಾಡಿ ಸರಕಾರಿ ಶಾಲೆಯಲ್ಲಿ ಶೆಫಿನ್ಸ್ ವತಿಯಿಂದ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ

ಕುಂದಾಪುರ: ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದಡಿಯಲ್ಲಿ ಶೆಫಿನ್ಸ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಹುಣ್ಸೆಮಕ್ಕಿ ಕ್ಲಸ್ಟರ್‌ನ ಯಡ್ಯಾಡಿ-ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲಯನ್ ಅರುಣ್ ಕುಮಾರ್ ಹೆಗಡೆ ಮಾತನಾಡಿ, ಶಾಲಾ ಮುಖ್ಯೋಪಾಧ್ಯಾಯರು ಶೆಫಿನ್ಸ್‌ ಇನ್‌ಸ್ಟಿಟ್ಯೂಟ್‌ನ ಪ್ರಭಾವಕ್ಕೆ ಒಳಗಾಗಿ ಆಂಗ್ಲ ಭಾಷೆಯಲ್ಲಿ ಸ್ವಾಗತ ಭಾಷಣ ಮಾಡಿರುವುದು ಸಂತಸ ತಂದಿದೆ ಎಂದರು. ಟ್ರಸ್ಟ್‌ನ 04 ದಿನಗಳ ತರಬೇತಿಯು ಎಷ್ಟು […]