ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ
ಉಡುಪಿ: ನಾಡಿನ ರಾಜ್ಯ ಭಾಷೆ ಕನ್ನಡದ ಉಳಿವಿಗಾಗಿ ಮತ್ತು ನಮ್ಮ ಸಂಸ್ಕೃತಿ ತಿಳಿದುಕೊಳ್ಳುವ ಸಲುವಾಗಿಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್, ಕಂಪನಿಗಳು ಕನ್ನಡದ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕವನ್ನು ದೊಡ್ಡದಾಗಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.