ಕನ್ನಡ ಪುಸ್ತಕ ನೀತಿ ಪುನರ್ ರಚನೆಗಾಗಿ ಸಾರ್ವಜನಿಕರಿಂದ ಸಲಹೆ ಆಹ್ವಾನ
ಉಡುಪಿ: ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇರುವುದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ. ಇ-ಪುಸ್ತಕ, ಆಡಿಯೋ ಪುಸ್ತಕ ಒಳಗೊಂಡಂತೆ ಆಧುನಿಕ ಪುಸ್ತಕೋದ್ಯಮದ ಸಾಧಕ-ಬಾಧಕಗಳು ಹಾಗೂ ಕನ್ನಡ ಪುಸ್ತಕ ಲೋಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಪುಸ್ತಕ ನೀತಿ ರಚನೆ ಆಗಬೇಕಿದ್ದು, ಇದಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಕನ್ನಡ ಪುಸ್ತಕ ನೀತಿ ಪುನರ್ ರಚನೆಗೆ ಸಾರ್ವಜನಿಕರಿಂದ […]
ಗಣರಾಜ್ಯೋತ್ಸವ ಅಂಗವಾಗಿ ಶೇ.50 ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ 2023 ರ ಜನವರಿ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು […]
ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟನೆ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ 2021 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಶನಿವಾರ ಪ್ರಕಟಿಸಿದರು. 2021 ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತರು: ಅತ್ಯುತ್ತಮ ಪ್ರಕಾಶನ ಪ್ರಶಸ್ತಿ- ಬೆಂಗಳೂರು ರಾಷ್ಟ್ರೋತ್ಥಾನ ಸಾಹಿತ್ಯ, ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ- ಧಾರವಾಡದ ಡಾ. ಗುರುಲಿಂಗ ಕಾಪಸೆ, ಡಾ. ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ- ಮೂಡಬಿದರೆಯ ಡಾ. ಮೋಹನ ಆಳ್ವ ಹಾಗೂ ಡಾ. ಅನುಪಮಾ […]