ಗುಡ್ಡ ಪಾಣಾರ ಮತ್ತು ಎಂ.ಎ.ನಾಯಕ್ ರವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಕೆ

ಉಡುಪಿ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ದೈವ ನರ್ತಕರಾದ ಗುಡ್ಡ ಪಾಣಾರ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಎ.ನಾಯಕ್ ಆಯ್ಕೆಯಾಗಿದ್ದು, ಇವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾರವರು ಸಾಧಕರ ನಿವಾಸಕ್ಕೆ ತೆರಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅಭಿನಂದಿಸಿದರು.

ತೆರೆಮರೆಯ ಅರ್ಹ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಬೆಂಗಳೂರು: ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದ್ದು, ಪದ್ಮ ಪ್ರಶಸ್ತಿ ಮಾದರಿಯಲ್ಲಿ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದ್ದು, ಸಾಮಾನ್ಯರಾಗಿದ್ದುಕೊಂಡು ಅಸಾಮಾನ್ಯ ಕೆಲಸ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದವರು, […]

ತೆರೆಮರೆಯ ಅರ್ಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಸಚಿವ ಸುನಿಲ್ ಕುಮಾರ್

ಉಡುಪಿ: ಈ ಬಾರಿಯ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 9823 ಅರ್ಜಿಗಳು ಬಂದಿವೆ. ಆದರೆ ಈ ಬಾರಿ ತೆರೆಯಮರೆಯಲ್ಲಿನ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಈ ಕುರಿತು ಈಗಾಗಲೇ ಆಯ್ಕೆ ಸಮಿತಿ ರಚನೆಯಾಗಿದ್ದು ಪ್ರಥಮ ಸಭೆ ಕೂಡಾ ಮುಗಿದಿದೆ ಆದಷ್ಟು ಶೀಘ್ರದಲ್ಲಿ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಭಾನುವಾರ ಆದಿ ಉಡುಪಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ […]