ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಕನ್ನಡ ರಾಜ್ಯೋತ್ಸವ
ಅಜ್ಮನ್: ಅರಬ್ ರಾಷ್ಟ್ರದ ಕುಂದಾಪುರ ಕನ್ನಡಿಗರು ಸೇರಿ ಕಟ್ಟಿದ ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಅಜ್ಮನ್ ಹೆಬಿಟೆಟ್ ಸ್ಕೂಲ್ ಸಭಾಂಗಣದಲ್ಲಿಆಯೋಜಿಸಿದ್ದ ಕುಂದಗನ್ನಡ ಉತ್ಸವ 2023-ಕುಂದಾಪುರ ರತ್ನ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಪ್ರದರ್ಶನ ಸಮಾರಂಭ ಯಶಸ್ವಿಯಾಗಿ ಜರುಗಿತು. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಮಂದರ್ತಿ ಮೂಲದ ಉದ್ಯಮಿ ವಿಶ್ವನಾಥ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗಲ್ಫ್ ರಾಷ್ಟ್ರದಲ್ಲಿರುವ ಕುಂದಗನ್ನಡಿಗರ ಸಾಧನೆ ಮತ್ತು ಪರಿಶ್ರಮ ಜಗತ್ತಿಗೆ ಮಾದರಿಯಾಗಿದೆ. ವೃತ್ತಿ ಬದುಕಿನ ಜೊತೆಗೆ ತಾಯಿ ನೆಲದ ಅಭಿಮಾನ […]
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಬ್ರಹ್ಮಾವರ: ತನು ಕನ್ನಡ ಮನ ಕನ್ನಡ ಎಂಬ ಕವಿ ವಾಣಿಯಂತೆ ಕನ್ನಡದ ಕುರಿತು ಅಭಿಮಾನವನ್ನು ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಕನ್ನಡ ಸಮೂಹ ಗೀತೆ, ಕನ್ನಡ ಭಾಷಣ ನಡೆಸಲಾಯಿತು. ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್ , ಉಪ ಪ್ರಾಂಶುಪಾಲೆ ಸುಜಾತ, ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥೆ ರಾಝಿಕಾ, ಕನ್ನಡ ಉಪನ್ಯಾಸಕ ನವೀನ್ ಕುಮಾರ್ , ಹಿಂದಿ […]
ಕನ್ನಡ ರಾಜ್ಯೋತ್ಸವ ಆಚರಿಸಿ ಕನ್ನಡ ಪ್ರೇಮ ಮೆರೆದ ನಟಿ ಪೂಜಾ ಗಾಂಧಿ
ಬೆಂಗಳೂರು: ಅನ್ಯ ರಾಜ್ಯದಿಂದ ನಟಿಯಾಗಿ ಕರ್ನಾಟಕಕ್ಕೆ ಆಗಮಿಸಿ ಪರಭಾಷಿಯಾಗಿದ್ದೂ ಸ್ಪಷ್ಟವಾಗಿ ಕನ್ನಡ ಮಾತನಾಡಲು, ಬರೆಯಲು ಕಲಿತು ಇತರರಿಗೂ ಕನ್ನಡ ಕಲಿಸುವ ಯೋಜನೆಯನ್ನು ಯಶಸ್ವಿಗೊಳಿಸಲು ಶ್ರಮವಹಿಸುತ್ತಿರುವ ನಟಿ ಪೂಜಾ ಗಾಂಧಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ಕನ್ನಡ ಪ್ರೇಮ ಮೆರೆದರು. ಪೂಜಾ ಗಾಂಧಿ ಕನ್ನಡಭಿಮಾನಿಯಾಗಿರುವ ಜೊತೆಗೆ ಕಾವೇರಿ ಹೋರಾಟದಲ್ಲಿಯೂ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಇವರ ಕನ್ನಡ ಪ್ರೀತಿಗೆ ಕನ್ನಡಿಗರು ಋಣಿಯಾಗಿದ್ದಾರೆ.
ಕನ್ನಡ ರಾಜ್ಯೋತ್ಸವದಂದು ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ
ನವದೆಹಲಿ: ರಾಜ್ಯವು ಇಂದು 67 ನೇ ರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ “ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ” ಎಂದು […]
ಅಂಗಡಿ ಮುಂಗ್ಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ
ಉಡುಪಿ: ರಾಜ್ಯ ಸರ್ಕಾರದ ಸುತ್ತೋಲೆ ಹಾಗೂ ಅಧಿಸೂಚನೆಯಂತೆ ಕನ್ನಡ ಭಾಷೆಯನ್ನು ರಾಜ್ಯದ ಎಲ್ಲಾ ಹಂತಗಳಲ್ಲಿ ಸಂಪೂರ್ಣವಾಗಿ ಅನುಷ್ಠಾನ ಜಾರಿಗೊಳಿಸುವಂತೆ ಸೂಚಿಸಲಾಗಿದ್ದು, ಅದರನ್ವಯ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್, ನಗರಸಭೆ, ಪಟ್ಟಣ ಪಂಚಾಯತ್ ಎಲ್ಲಾ ಅಧೀನ ಕಛೇರಿ, ಅಂಗಡಿ ಮುಂಗ್ಗಟ್ಟು, ಮಾರಾಟ ಮಳಿಗೆ, ಹೊಟೇಲ್, ಬ್ಯಾಂಕ್, ಕಂಪೆನಿಗಳಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಹೆಚ್ಚು ಎದ್ದು ಕಾಣುವ ಹಾಗೆ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.