ಡಿ. 5 ಮತ್ತು 6 ರಂದು ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 5 ಮತ್ತು 6 ರಂದು ಕೋಟ ವಿವೇಕ ವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಡಿ. 5 ರಂದು ಬೆಳಗ್ಗೆ 10.15 ಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಾರ್ಯಕ್ರಮಉದ್ಘಾಟಿಸಲಿದ್ದು, ಸಂಶೋಧಕ ಹಾಗೂ ವಿದ್ವಾಂಸ ಬಾಬುಶಿವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ […]
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಣಿಪಾಲ ಸರಳಬೆಟ್ಟು ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಊರಿನ ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು, ಭಾಗವಹಿಸಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಅವರನ್ನು ಸರ್ವಾನುಮತದಿಂದ ಆಯ್ಕೆ […]
ಸಾಹಿತ್ಯ ಲೋಕಕ್ಕೆ ಕನ್ನಡ ಲೇಖಕರ ಕೊಡುಗೆ ಅಮೂಲ್ಯ: ಪ್ರೊ ಮುರಳೀಧರ ಉಪಾಧ್ಯ
ಉಡುಪಿ: ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದು ನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ ಮುರಳೀಧರ ಉಪಾಧ್ಯ ಹೇಳಿದರು. ಗುರುವಾರ ಎಂ.ಜಿ.ಎಂ ಕಾಲೇಜು,ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಮಾಸ್ತಿ, ಶಿವರಾಮ ಕಾರಂತರು, […]
ನ.11 ರಂದುಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿ ಉಪನ್ಯಾಸ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ದಿ. ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭವನ್ನು ನವೆಂಬರ್ 11, ಶನಿವಾರದಂದು 10.30ಕ್ಕೆ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡಿನಲ್ಲಿ ನಡೆಸಲಾಗುವುದು. ಪ್ರಸಿದ್ಧ ಉರಗ […]
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೂರ್ಮಾ ರಾವ್ ಅವರಿಗೆ ಬೀಳ್ಕೊಡುಗೆ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೂರ್ಮಾರಾವ್ ಅವರ ತಾಳ್ಮೆ, ಕರ್ತವ್ಯ ನಿಷ್ಠೆ, ನಾಯಕತ್ವ ಗುಣವನ್ನು ಶ್ಲಾಘಿಸಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಪೂರ್ಣಿಮಾ, ಸಹಾಯಕ ನಿರ್ದೇಶಕಿ ಕನ್ನಡ ಸಂಸ್ಕೃತಿ ಇಲಾಖೆ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸ್ಥಿತರಿದ್ದರು.