ಉಡುಪಿ ತಾಲೂಕು ಕಸಾಪ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಗೌರವ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಉಡುಪಿಯ ನೂತನ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರನ್ನು ನಾಡೋಜ ಪ್ರೊ. ಕೆ. ಪಿ ರಾವ್ ಅಭಿನಂದನಾ ಸಮಿತಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿಯವರು ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ., ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಕಸಾಪ ಜಿಲ್ಲಾ ಸಮಿತಿ ಸದಸ್ಯ ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಕ ಮಿರ್ಜಾ ಇಸ್ಮಾಯಿಲ್ ಜನ್ಮ ದಿನಾಚರಣೆ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಮಿರ್ಜಾ ಇಸ್ಮಾಯಿಲ್ ಇವರ ಹುಟ್ಟು ಹಬ್ಬವನ್ನು ಮಂಗಳವಾರ ಉಡುಪಿಯ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಆಚರಿಸಲಾಯಿತು. ಮಿರ್ಜಾ ಇಸ್ಮಾಯಿಲ್ ಅವರ ಮಾನವೀಯ ಗುಣಗಳನ್ನು ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕಾರ್ಯದರ್ಶಿ ಆನಂದ್ ಪಿ, ಹಾಗೂ ನರಸಿಂಹಮೂರ್ತಿಯವರು ಕೊಂಡಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರ ಶ್ರೀನಾಥ್  ಭಾಗವಹಿಸಿದ್ದರು. ಸಭಾಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ […]

ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ ವತಿಯಿಂದ ಸಾಧಕ ಶಿಕ್ಷಕರಿಗೆ ಸನ್ಮಾನ

ಉಡುಪಿ:ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು. ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್ (ಶಿಕ್ಷಣ ಹಾಗೂ ರಂಗಭೂಮಿ) , ರಾಜೇಂದ್ರ ಭಟ್ ಕೆ (ಶಿಕ್ಷಣ ಹಾಗೂ ನಿರೂಪಣೆ ) , ಪ್ರೊ. ನಾರಾಯಣ ಎಂ. ಹೆಗಡೆ […]