ಡಿ. 5 ಮತ್ತು 6 ರಂದು ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 5 ಮತ್ತು 6 ರಂದು ಕೋಟ ವಿವೇಕ ವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಡಿ. 5 ರಂದು ಬೆಳಗ್ಗೆ 10.15 ಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಾರ್ಯಕ್ರಮಉದ್ಘಾಟಿಸಲಿದ್ದು, ಸಂಶೋಧಕ ಹಾಗೂ ವಿದ್ವಾಂಸ ಬಾಬುಶಿವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ […]

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮಣಿಪಾಲ ಸರಳಬೆಟ್ಟು ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಊರಿನ ಹಿರಿಯರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಕಲಾವಿದರು, ಭಾಗವಹಿಸಿದ್ದ ಈ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹೇಶ್ ಠಾಕೂರ್ ಅವರನ್ನು ಸರ್ವಾನುಮತದಿಂದ ಆಯ್ಕೆ […]

ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 30 ರಂದು ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.