ನಾರಾಯಣ ಗುರುಗಳ ತತ್ವಾದರ್ಶ ಪಾಲಿಸಿ ವಿಶ್ವಶಾಂತಿಗೆ ಮುಂದಡಿಯಿಡಬೇಕು: ಸಚಿವ ಸುನಿಲ್ ಕುಮಾರ್

ಉಡುಪಿ: ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನೇ ಬಯಸುತ್ತವೆ ಎಂಬ ನಾರಾಯಣಗುರುಗಳ ಸಂದೇಶ ಅರಿಯುವ ಮೂಲಕ ವಿಶ್ವದಾದ್ಯಂತ ವಿವಿಧ ಧರ್ಮಗಳ ನಡುವೆ ನಡೆಯುತ್ತಿರುವ ವಾದವನ್ನು ಕೊನೆಗಾಣಿಸಿ, ವಿಶ್ವಶಾಂತಿ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಿಲ್ಲವರ ಸೇವಾ ಸಂಘ ಬನ್ನಂಜೆ ಇವರ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ […]

ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಿದ ಕೀರ್ತಿ ಡಾಕ್ಟರ್ ಸತೀಶ್ ಹೊಸಮನಿ ಸಲ್ಲುತ್ತದೆ: ರಮಾನಂದ ಗುರೂಜಿ

ಹೊಸಪೇಟೆ: ಜ್ಞಾನಭಂಡಾರಗಳೆನಿಸಿದ ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಿ ಪ್ರತಿಯೊಬ್ಬರಿಗೂ ದೊರಕುವಂತೆ ಮಾಡಿದ ಕೀರ್ತಿ ಡಾಕ್ಟರ್ ಸತೀಶ ಹೊಸಮನಿ ಅವರಿಗೆ ಲಭಿಸುತ್ತದೆ. ಇವರ ಸಾಧನೆ ಎಲ್ಲರಿಗೂ ಮಾದರಿಯಾಗಲಿ ಎಂದು ರಮಾನಂದ ಗುರೂಜಿ ಹೇಳಿದರು. ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಅಭಿವೃದ್ಧಿ ಟ್ರಸ್ಟ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಸಾಂಸ್ಕೃತಿಕ ಲೋಕೋತ್ಸವ 2022 ಹಾಗೂ ಜುಲೈ 31ರ೦ದು ನೆರವೇರಲಿರುವ ವಿಜಯನಗರ ಕರ್ನಾಟಕ 4 ನೇ ಸಾಂಸ್ಕೃತಿಕ […]