ಜ. 18: ಉಡುಪಿ 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಉಡುಪಿ: 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಗರದ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಜ. 18ರಂದು ನಡೆಯಲಿದೆ ಎಂದು ಉಡುಪಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಸಮ್ಮೇಳನಾಧ್ಯಕ್ಷತೆಯನ್ನು ಜಾನಪದ ವಿದ್ವಾಂಸ ಹಾಗೂ ಸಾಹಿತಿ ಡಾ. ಗಣನಾಥ ಎಕ್ಕಾರು ವಹಿಸಿಕೊಳ್ಳಲಿದ್ದಾರೆ ಎಂದರು. ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ನಗರಸಭಾ ಸದಸ್ಯ ಹರೀಶ್ ಶೆಟ್ಟಿ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಬಳಿಕ […]