ದ.ಕ. ಜಿಲ್ಲೆ: ಸಂಭ್ರಮದ ಕನ್ನಡ ರಾಜ್ಯೋತ್ಸವ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಂದಿನ ವರ್ಷ ನೀಡುವುದಾಗಿ ಅವರು ತಿಳಿಸಿದರು. ದಕ್ಷಿಣ […]