84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಕನ್ನಡ ಶಾಲೆಗಳ ಅಳಿವು-ಉಳಿವು ವಿಚಾರಗೋಷ್ಠಿ
ಧಾರವಾಡ ; ‘ಕನ್ನಡವನ್ನು ನಾವು ಉಳಿಸಬೇಕು ಎಂಬ ಮನಸ್ಥಿತಿಯಿಂದ ಕನ್ನಡದಿಂದ ನಾವು ಉಳಿಯಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಲಿ.’ ಇದು 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ನಡೆದ ಕನ್ನಡ ಶಾಲೆಗಳ ಅಳಿವು-ಉಳಿವು ವಿಚಾರಗೋಷ್ಠಿಯ ತಿರುಳು. ಸ್ವತಃ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಕಂಬಾರ ಹಾಗೂ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಪಾಟೀಲ ಅವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಈಗಾಗಲೇ ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಈ ವಿಚಾರಗೋಷ್ಠಿ ಮಹತ್ವ ಪಡೆದಿತ್ತು. ಮಾತೃಭಾಷೆಯ ಶಿಕ್ಷಣ ಆಯ್ಕೆಯಾಗದೇ […]