15 ಕೋ.ರೂ. ವೆಚ್ಚದಲ್ಲಿ ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ

ಉಡುಪಿ: ಇತಿಹಾಸ ಪ್ರಸಿದ್ಧ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನ 15 ಕೋ.‌ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ದೇವಸ್ಥಾನ ಆಡಳಿತ ಸಮಿತಿ‌ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ದೇವಳದ ‘ಗರ್ಭಗುಡಿ ಹೊರತುಪಡಿಸಿ ದೇವಸ್ಥಾನವು ಸಂಪೂರ್ಣ ಶಿಲಾಮಯವಾಗಿ ನಿರ್ಮಾಣವಾಗುತ್ತಿದೆ. ನೂತನ ಕೊಡಿಮರ ಸಮರ್ಪಣೆ ಅಂಗವಾಗಿ ಜ.22ರಂದು ಸಂಜೆ 5ಕ್ಕೆ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ನಗರದ ಜೋಡುಕಟ್ಟೆಯಿಂದ ಜಯದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಸಾಗುವ ಶೋಭಾ‌ಯಾತ್ರೆಯಲ್ಲಿ ವಿಷ್ಣುಸಹಸ್ರನಾಮ ಪಾರಾಯಣ, ಪೂರ್ಣಕುಂಭ ಕಲಶದೊಂದಿಗೆ ಚಂಡೆ, […]