ಬಹುನಿರೀಕ್ಷಿತ ‘ಕಾಂತಾರ’ ಪ್ರೀಕ್ವೆಲ್ ಬಿಡುಗಡೆಗೆ ಹೊಸ ಅಪ್ಡೇಟ್
ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ ‘ಕಾಂತಾರ’. ಅದ್ಭುತ ಕಥೆಯೊಂದಿಗೆ ಪ್ರತಿ ಪಾತ್ರವನ್ನೂ ಸುಂದರವಾಗಿ, ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆಗುವುದರೊಂದಿಗೆ, ಪ್ರೇಕ್ಷಕರನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ಈ ಚಿತ್ರದಿಂದಾಗಿ ಶೆಟ್ರ ಕ್ರೇಜ್ ಕೂಡ ಹೆಚ್ಚಾಗಿದೆ. ಸ್ಟಾರ್ ತಾರೆಯರಿಂದ ಹಿಡಿದು ಸಾಮಾನ್ಯ ಜನರವರೆಗೂ ‘ಕಾಂತಾರ’ ತಲುಪಿದೆ.ನಟ, ನಿರ್ದೇಶಕ ರಿಷಬ್ ಶೆಟ್ಟಿ ಸ್ವಯಂ ನಿರ್ದೇಶಿಸಿ, ನಟಿಸಿ ಸೈ ಎನಿಸಿಕೊಂಡ ಸಿನಿಮಾವಿದು. ರಿಷಬ್ ಶೆಟ್ಟಿ ಸಾರಥ್ಯದ ‘ಕಾಂತಾರ’ ಸಿನಿಮಾದ […]