ಉಡುಪಿಯಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದ್ವೆ..! ಮಳೆ ಬರಲು ಹೀಗೊಂದು ವಿನೂತನ ಪ್ರಾರ್ಥನೆ
ಉಡುಪಿ: ದೇಶದಾದ್ಯಂತ ಮಳೆಗಾಗಿ ಒಂದಿಲ್ಲೊಂದು ರೀತಿಯಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಆದರೆ ಉಡುಪಿಯ ಕಿದಿಯೂರ್ ಹೋಟೆಲಿನ ಸಭಾಂಗಣದಲ್ಲಿ ಶನಿವಾರ ವಿಶೇಷ ಹಾಗೂ ವಿಭಿನ್ನವಾಗಿ ಕಪ್ಪೆ ಗಳಿಗೆ ಮದ್ವೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಮಾಡಲಾಯಿತು. ಹಿಂದೂ ಸಂಪ್ರದಾಯದಂತೆ ಕಾಲು ಉಂಗುರ ತೊಡಿಸಿ, ಮಾಂಗಲ್ಯವನ್ನು ಕಟ್ಟಿ ಕಪ್ಪೆಗಳ ಮದುವೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಪಂಚರತ್ನಾ ಸೇವಾ ಟ್ರಸ್ಟ್ ವತಿಯಿಂದ ಮಂಡೂಕ ಕಲ್ಯಾಣೋತ್ಸವ ಹಮ್ಮಿ ಕೊಳ್ಳಲಾಯಿತು. ಉಡುಪಿಯ ಕೊಳಲಗಿರಿ ಸಮೀಪದ ಕೀಳಿಂಜೆ ಎಂಬಲ್ಲಿ ಪತ್ತೆಯಾದ […]