ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಕುಲಾಲ್ ಪಕ್ಕಾಲ್ ನೇಮಕ
ಪೆರ್ಡೂರು: ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪೆರ್ಡೂರು ಗ್ರಾಪಂ ಸದಸ್ಯ ಸಂತೋಷ್ ಕುಲಾಲ್ ಪಕ್ಕಾಲ್ ಅವರು ನೇಮಕಗೊಂಡಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಪೆರ್ಡೂರಿನ ಕಾಂಗ್ರೆಸ್ ಮುಖಂಡ ಕೆ. ಶಾಂತಾರಾಮ ಸೂಡ ಅವರ ವಿಶೇಷ ಮುತುವರ್ಜಿಯಿಂದ ಸಂತೋಷ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.