ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಿರ್ವ ಪಂಚಾಯತ್ ವ್ಯಾಪ್ತಿಯ ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ

ಶಿರ್ವ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ವಿಧಾನಸಭಾ ಚುನಾವಣೆಯ ಪ್ರಯುಕ್ತ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಮುಖ್ ಶ್ರೀ ವಿಜೇಂದ್ರ ಗುಪ್ತ ಅವರೊಂದಿಗೆ ಶಿರ್ವ ಪಂಚಾಯತ್ ವ್ಯಾಪ್ತಿಯ ಪ್ರದೇಶದ ನಿವಾಸಿಗಳ ಮನೆ ಮನೆಗೆ ತೆರಳಿ ಮತಯಾಚಿಸಿದರು.