ಕಾಪು: ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಪಲ್ಟಿ: ಚಾಲಕ, ನಿರ್ವಾಹಕ ಪಾರು
ಕಾಪು: ಖಾಲಿ ಸಿಲಿಂಡರ್ ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಲಾರಿಯು ಖಾಲಿ ಸಿಲಿಂಡರ್ ಗಳನ್ನು ತುಂಬಿಸಿಕೊಂಡು ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಪಾಂಗಾಳ ವಿಜಯಾ ಬ್ಯಾಂಕ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರ ಪರಿಣಾಮ ಲಾರಿಯಲ್ಲಿದ್ದ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಆದರೆ ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು […]