ಕಾಪು; ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಕಾಪು ಮಲ್ಲಾರು ಸಲಫಿ ಮಸೀದಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ರಜಾಕ್‌ ಮಲ್ಲಾರ್‌ ಎಂದು ಗುರುತಿಸಲಾಗಿದೆ. ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ […]