ಎ. 9 ರಂದು ಕಾಪು ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಕಾಪು: ಭರದಿಂದ ಸಾಗುತ್ತಿರುವ ಕಾಪು ಮಾರಿಯಮ್ಮ ದೇವಿಯ ನೂತನ ದೇಗುಲ ಸಮರ್ಪಣೆ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎ. 9ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಚಂಗಿ ದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ವಿ| ಕೆ.ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ […]