ಕಾಪು ಮಾರಿ ಪೂಜೆ: ಮದ್ಯ ನಿಷೇಧ ಆದೇಶ ಹಿಂಪಡೆದ ಡಿಸಿ
ಉಡುಪಿ: ಕಾಪುವಿನ ಮೂರು ಮಾರಿಗುಡಿಗಳಲ್ಲಿ ಮಾರ್ಚ್ 23 ಮತ್ತು 24ರಂದು ಸುಗ್ಗಿ ಮಾರಿ ಪೂಜೆ ನಡೆಯುವ ಹಿನ್ನೆಲೆಯಲ್ಲಿ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಲಾಗಿದ್ದ ಆದೇಶವನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹಿಂಪಡೆದಿದ್ದಾರೆ. ಈವರೆಗೆ ಸುಗ್ಗಿ ಮಾರಿ ಪೂಜೆ ದಿನದಂದು (ಎರಡು ದಿನ) ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಹಾಗೂ ಸಾರ್ವಜನಿಕರ ಶಾಂತಿ ಭಂಗ […]