ಕಾಪು: ಮಾ. 26-27 ರಂದು ಮೂರು ಮಾರಿಗುಡಿಯಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ

ಕಾಪು: ಹಳೆ ಮಾರಿಗುಡಿ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಮತ್ತು ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ(Kaup Marigudi) ಏಕಕಾಲದಲ್ಲಿ ಜರಗುವ ಕಾಲಾವಧಿ ಸುಗ್ಗಿ ಮಾರಿಪೂಜೆಯು ಮಾ. 26 ಮತ್ತು 27ರಂದು ನಡೆಯಲಿದೆ. ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಎರಡು ದಿನಗಳ ಕಾಲ ಏಕಕಾಲದಲ್ಲಿ ನಡೆಯುವ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಉಡುಪಿ ಜಿಲ್ಲೆ ಮಾತ್ರವಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕಾಸರಗೋಡು, ಬೆಂಗಳೂರು, ಮುಂಬಯಿ ಹಾಗೂ ದೇಶ-ವಿದೇಶಗಳಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ವಿವಿಧ […]

ಕಾಪು: ಮಹಾಲಕ್ಷ್ಮಿ ಅತಿಥಿ ಗೃಹ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಇಲ್ಲಿನ ಹಳೆ ಮಾರಿಗುಡಿ ದೇವಸ್ಥಾನದ ಬಳಿ ಹೊಸದಾಗಿ ನಿರ್ಮಾಣಗೊಂಡಿರುವ ಮಹಾಲಕ್ಷ್ಮಿ ಅತಿಥಿ ಗೃಹ ಇದರ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಬಳಿಕ ದೇವಸ್ಥಾನದ ಇ-ಹುಂಡಿಗೆ ಚಾಲನೆ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ ನಿಮಿತ್ತ ದೇವಿ ಸಾನಿಧ್ಯ ಪ್ರತಿಷ್ಠೆ

ಕಾಪು: ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಗುಡಿಯಲ್ಲಿ ಜೂ.12 ರಂದು ಸೋಮವಾರ ಶ್ರೀ ಮಾರಿಯಮ್ಮ ದೇವಿ ಮತ್ತು ಶ್ರೀ ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ ಹಾಗೂ ನಿರ್ಮಾಣ ಹಂತದ ಶಿಲಾಮಯ ಗರ್ಭಗುಡಿಯ ಮಹಾದ್ವಾರ ಸ್ಥಾಪನಾ ಪೂಜೆ ನಡೆಯಿತು. ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ ಮತ್ತು ವಿವಿಧ ಉಪಸಮಿತಿಗಳು ಹಾಗೂ ಎಲ್ಲಾ ಸಮಾಜಗಳ […]

ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ

ಕಾಪು: ಗೌಡ ಸಾರಸ್ವತ ಸಮಾಜಕ್ಕೆ ಒಳಪಟ್ಟ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಶ್ರೀ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವನ್ನು ಸೆ 26ರಿಂದ ಅ. 05.10.2022ರವರೆಗೆ ಆಚರಿಸಲಾಗುವುದು. ಅ.11 ರಂದು ಚಂಡಿಕಾಯಾಗ ಪೂರ್ಣಾಹುತಿ ಜರಗಲಿರುವುದು. ತಾವು ಇಷ್ಟಮಿತ್ರ ಬಂಧು- ಬಾಂಧವರೊಡಗೂಡಿ ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೃತಾರ್ಥರಾಗಬೇಕಾಗಿ ಅಪೇಕ್ಷಿಸುವ, ಆಡಳಿತ ಮಂಡಳಿ ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು. ಕಾರ್ಯಕ್ರಮಗಳ ವಿವರ: ತಾ 26.09.2022 ರಿಂದ ಪ್ರತಿ ದಿನ ಶ್ರೀ ದೇವಿ ಮಹಾತ್ಮೆ ಪಾರಾಯಣ, ನವದುರ್ಗಾ ಪೂಜೆ ತಾ […]