ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಉಡುಪಿ‌: ಕನ್ನಡ ಚಿತ್ರ ನಟ ರಕ್ಷಿತ್ ಶೆಟ್ಟಿ ಫೆಬ್ರವರಿ 22ರಂದು ತಮ್ಮ ಹುಟ್ಟೂರಾದ ಉಡುಪಿಯಲ್ಲಿ ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ನಂತರ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದ ರಕ್ಷಿತ್ ಶೆಟ್ಟಿ, ನಾನು ಬಾಲ್ಯದಲ್ಲಿ ಪ್ರತಿವರ್ಷ ತಂದೆಯೊಂದಿಗೆ ಕಾಪುವಿನಲ್ಲಿ ಬಾವನ ಮನೆಗೆ ಬರುವಾಗ ಮಾರಿಗುಡಿಗೆ ಬಂದು ಹೋಗುತ್ತಿದ್ದೆ, ಈಗ ಇದರ ಸಂಪೂರ್ಣ […]

ಕಾಪು ಮಾರಿಯಮ್ಮ ದೇಗುಲದ ಕಾಮಗಾರಿ ವೀಕ್ಷಿಸಿದ ರವಿಶಂಕರ್ ಗುರೂಜಿ

ಕಾಪು: ದಕ್ಷಿಣ ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ನಿರ್ಮಾಣಗೊಳ್ಳುತ್ತಿರುವ ಇಳಕಲ್‌ ಕೆಂಪು ಶಿಲೆಯ ದೇಗುಲದ ಕಾಮಗಾರಿ ವೀಕ್ಷಿಸಿ, ಇದು ಭಕ್ತಿ–ಭಾವದ ಸಂಕೇತ ಎಂದು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ಮುಖ್ಯಸ್ಥ ರವಿಶಂಕರ್ ಗುರೂಜಿ ಅಭಿಪ್ರಾಯಪಟ್ಟರು. ಮಂಗಳವಾರ ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲರೂ ಸೇರಿ ಹೃದಯದಿಂದ ಕೆಲಸ ಮಾಡಿದರೆ ದೇವಿಯ ಅನುಗ್ರಹ ಪ್ರಾಪ್ತವಾಗುತ್ತದೆ. ದಿನನಿತ್ಯ ಇಲ್ಲಿ ಚಮತ್ಕಾರಗಳು ನಡೆಯುತ್ತಿದ್ದು, ಭಕ್ತರ ಇಷ್ಟಾರ್ಥಗಳು ನೆರವೇರುತ್ತಿವೆ. ಆದ್ದರಿಂದ ಕ್ಷೇತ್ರ […]