ಕಾಪು: ಪುರಸಭಾ ಚುನಾವಣೆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ
ಕಾಪು: ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಕಾಪು ಮಂಡಲ ವತಿಯಿಂದ ಬೃಹತ್ ಕಾರ್ಯಕರ್ತರ ಸಮಾವೇಶವು ಕಾಪು ಕೆ.ಒನ್. ಸಭಾಂಗಣದಲ್ಲಿ ಜರಗಿತು. ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ವಿ. ಕುಮಾರ್ ರವರು ಮತ್ತು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ರವರು ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾಪು ಪುರಸಭಾ ಚುನಾವಣಾ ಸಂಚಾಲಕರಾದ […]