ಕಾಪು: ದಿ.ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ಸ್ಮರಣಾರ್ಥ ‘ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆ’
ಕಾಪು: ಗುರ್ಮೆ ಫೌಂಡೇಶನ್ ವತಿಯಿಂದ ದಿ.ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ಸ್ಮರಣಾರ್ಥ ಕಾಪುವಿನ ಕಳತ್ತೂರಿನ ಗುರ್ಮೆಯಲ್ಲಿ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆಗೊಂಡಿತು. ಇದೇ ಸಂದರ್ಭದಲ್ಲಿ ಕೀರ್ತನ, ಸಾಂತ್ವನ, ಯಕ್ಷಗಾನ ಕಾರ್ಯಕ್ರಮ ವೈಭವದಿಂದ ನಡೆಯಿತು. ಕಾರ್ಯಕ್ರಮವನ್ನು ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಗಳು, ಮಾತೃ ಸೇವೆ, ಗೋ ಸೇವೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಮಾತೃ ಸೇವೆ ಹಾಗೂ ಗೋ ಸೇವೆಯಿಂದ ಏಳಿಗೆ ಸಾಧ್ಯ ಎಂದರು. ಗ್ರಾಮೀಣಾಭಿವೃದ್ಧಿ ಸಚಿವ […]