ಕಾಪು ತಾಲೂಕು: ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರ ಸಮ್ಮುಖದಲ್ಲಿ ಗುರುವಾರ ಮೀಸಲಿರಿಸಿ ಹಂಚಿಕೆ ಮಾಡಲಾಗಿದ್ದು, 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ವಿವರ ಈ ಕೆಳಗಿನಂತಿದೆ. ಬೆಳ್ಳೆ ಗ್ರಾ.ಪಂ: ಅಧ್ಯಕ್ಷ – ಹಿಂದುಳಿದ ವರ್ಗ ಅ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಕುರ್ಕಾಲು ಗ್ರಾ.ಪಂ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ- ಸಾಮಾನ್ಯ, ಶಿರ್ವ ಗ್ರಾ.ಪಂ: ಅಧ್ಯಕ್ಷ-ಸಾಮಾನ್ಯ, ಉಪಾಧ್ಯಕ್ಷ-ಸಾಮಾನ್ಯ ಮಹಿಳೆ, ಇನ್ನಂಜೆ ಗ್ರಾ.ಪಂ: ಅಧ್ಯಕ್ಷ – […]