ಕಾಪು: ನಾರಾಯಣಗುರು ಮಂದಿರದಲ್ಲಿ ಕಳವು

ಕಾಪು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಂದಿರಕ್ಕೆ ಬುಧವಾರ ತಡರಾತ್ರಿ ಕಳ್ಳರು ನುಗ್ಗಿದ್ದು, ಮಂದಿರದ ಕಾಣಿಕೆ ಡಬ್ಬಿಯನ್ನು ಒಡೆದು ನಗ-ನಗದು ದೋಚಿ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ. ಕಳ್ಳರು ಮಂದಿರದ ಬಾಗಿಲಿನ ಚಿಲಕವನ್ನು ಮುರಿದು ಒಳನುಗ್ಗಿದ್ದು, ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ಕಳವು ಮಾಡಿದ್ದಾರೆ. ಅಲ್ಲದೆ ಕಪಾಟಿನ ಬೀಗ ಮುರಿದು ತಡಕಾಡಿದ್ದಾರೆ. ಇಂದು ಬೆಳಿಗ್ಗೆ ಮಂದಿರದ ಅರ್ಚಕರು ಪೂಜೆಗಾಗಿ ಆಗಮಿಸಿದ ವೇಳೆ ಕಳ್ಳತನ‌ ನಡೆದಿರುವ ವಿಚಾರ ಗೊತ್ತಾಗಿದೆ. ಅವರು ಕೂಡಲೇ […]