ಕಾಪು: ಕಾರು ಡಿಕ್ಕಿ ಹೊಡೆದು ಮಹಿಳೆ ಮೃತ್ಯು
ಕಾಪು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಮೂಳೂರಿನ ಯೂನಿಯನ್ ಬ್ಯಾಂಕ್ ಬಳಿ ಇಂದು ಸಂಭವಿಸಿದೆ. ಮೃತರನ್ನು ಮೂಳೂರು ಪಡು ನಿವಾಸಿ ಆಯಿಶಾ (42) ಎಂದು ಗುರುತಿಸಲಾಗಿದೆ. ಆಯಿಶಾ ದಿನಸಿ ವಸ್ತು ಖರೀದಿಸಲು ಪೇಟೆ ಬಂದಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ […]