ಅ.15 ರಿಂದ ಅ.24 ರ ವರೆಗೆ ದ್ವಿತೀಯ ವರ್ಷದ ಉಚ್ಚಿಲ ದಸರಾ: ಮೈಸೂರು ದಸರಾ ಮಾದರಿಯಲ್ಲಿರಲಿದೆ ಕಾರ್ಯಕ್ರಮಗಳು!!
ಕಾಪು: ಅ.15 ರಿಂದ 24 ರ ವರೆಗೆ ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ ದ್ವಿತೀಯ ಉಚ್ಚಿಲ ದಸರಾ ಕಾರ್ಯಕ್ರಮವು ಸಂಭ್ರಮದಿಂದ ಜರುಗಲಿದ್ದು, ಅದರ ಪೂರ್ವಾಭಾವಿ ಸಭೆಯು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ. ಜಿ.ಶಂಕರ್ ಅಧ್ಯಕ್ಷತೆಯಲ್ಲಿ ಜರುಗಿತು. ಕಳೆದ ವರ್ಷ ಜೀರ್ಣೋದ್ಧಾರ ನಡೆದ ಬಳಿಕ ಕ್ಷೇತ್ರವು ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯುತ್ತಿದೆ. ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಯೋಜಿಸಲು ಉದ್ದೇಶಿಸಲಾಗಿದೆ ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ ಕ್ಷೇತ್ರದ ಜೀರ್ಣೋದ್ಧಾರದ […]
ವೀಡಿಯೋ ಪ್ರಕರಣ: ಜುಲೈ 27 ರಂದು ಕಾಪು ಪೇಟೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ
ಉಡುಪಿ: ಇಲ್ಲಿನ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಜುಲೈ 27 ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. […]
ಕಾಪು: ಮನೆ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ತಾಲೂಕಿನಲ್ಲಿ ಸುರಿದ ಮಳೆಗೆ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಬೆಟ್ಟು ನಿವಾಸಿ ಗೋಪಾಲ ಪಾಣಾರ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಜು. 24 ರಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದರು. ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಬಲ್ಲಾಳ್, ಸವಿತಾ ಎ ಶೆಟ್ಟಿ, ಸುಜಲಾ ಪೂಜಾರಿ, ಕೋಟೆ ಗ್ರಾಮ ಪಂಚಾಯತ್ ಸದಸ್ಯ […]
ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್‌ಕ್ಲೇವ್‌ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]
ಕಾಪು: ಕಡಲ್ಕೊರೆತ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು: ಕಾಪು ತಾಲೂಕಿನ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಸಹಾಯಕ ಅಭಿಯಂತರ ಜಯರಾಜ್, […]