ಕಾಪು: ರಕ್ಷಿತ್ ಕೋಟ್ಯಾನ್ ಹಲ್ಲೆ ಪ್ರಕರಣ; ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕೃತ್ಯ ಎಸಗಿರುವುದು ಕಂಡು ಬಂದಿದೆ. ತಾವು […]

ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ನಿತ್ಯ ಹೋರಾಟಕ್ಕೂ ಸಿದ್ದ: ಕಾಪು ಬಿಜೆಪಿ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಜ್ಯ ಸರಕಾರ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಮಾತ್ರ ಉಚಿತ ಎನ್ನುತ್ತಾ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟವಾಗಿದೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು […]

ಕಾಪು: ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಕಂಟ್ರೋಲ್ ರೂಂ ಸ್ಥಾಪನೆ

ಉಡುಪಿ: ಕಾಪು ತಹಶೀಲ್ದಾರರ ಕಚೇರಿಯಲ್ಲಿ ಮಳೆಗಾಲದ ಸಮಯದಲ್ಲಿ ಹಾನಿ ಮತ್ತು ಪ್ರಾಕೃತಿಕ ವಿಕೋಪಗಳ ನಿರ್ವಹಣೆಗಾಗಿ ದಿನದ 24 ಗಂಟೆಯೂ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಸಾರ್ವಜನಿಕರು ದೂ.ಸಂ. 0820-2551444 ನ್ನು ಸಂಪರ್ಕಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಪು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು: ಅದಮಾರು ಶ್ರೀಗಳಿಂದ ಗೋ ರುದ್ರಭೂಮಿ ನಿರ್ಮಾಣ ಕಾರ್ಯದ ಭೂಮಿ ಪೂಜೆ

ಕಾಪು: ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು ಶುಕ್ರವಾರದಂದು ಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ, ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಗೆ ಭೂಮಿ ಪೂಜೆ ಮೂಲಕ ಅಡಿಗಲ್ಲು […]

ಕಾಪು: ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಆಟೋರಿಕ್ಷಾ ಮೇಲೆ ಉರುಳಿದ ಮರ; ಇಬ್ಬರು ಪ್ರಯಾಣಿಕರ ಸಾವು

ಕಾಪು: ನಿನ್ನೆ ಸಂಜೆ ವೇಳೆಗೆ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾ ಮೇಲೆ ಬೃಹತ್ ಗಾತ್ರದ ಮರ ಬಿದ್ದು ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು – ಶಿರ್ವ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ ವೇಳೆ ಈ ಅವಘಡ ಸಂಭವಿಸಿದೆ. ಪಾದೂರು ಕೂರಾಲು ರೈಸ್ ಮಿಲ್ ಬಳಿಯ ನಿವಾಸಿ 45 ವರ್ಷದ ಪುಷ್ಪಾ ಕುಲಾಲ್ ಮತ್ತು ಕಳತ್ತೂರು ನಿವಾಸಿ 48ವರ್ಷದ ಕೃಷ್ಣ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ರಿಕ್ಷಾ ಚಾಲಕ […]