ಉಚ್ಚಿಲ: ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕೈ ಹಿಡಿದ 300 ಕ್ಕೂ ಹೆಚ್ಚು ಮೀನುಗಾರರು
ಉಚ್ಚಿಲ: ಬುಧವಾರದಂದು ಉಚ್ಚಿಲ ಬಡಾ ಗ್ರಾಮದ 300ಕ್ಕೂ ಹೆಚ್ಚು ಮೀನುಗಾರ ಮುಖಂಡರು ಹಾಗೂ ಯುವಕ ಮತ್ತು ಯುವತಿಯರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಮೀನುಗಾರರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, ಕಡಲ ತಡಿಯ ಈ ಭಾಗದಲ್ಲಿ ಮೀನುಗಾರರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇಷ್ಟು ಜನ ಮೀನುಗಾರರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಇದೇ ಮೊದಲು. ಮೊಗವೀರ ಸಮಾಜವನ್ನು ಕೇವಲ ಓಟ್ ಬ್ಯಾಂಕ್ ಗೆ […]
ಕಾಪು: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಕಾಪು: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ನೆರವೇರಿತು. ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರು ರತ್ನಾಕರ ಹೆಗ್ಡೆ ಬಿಡುಗಡೆ ಮಾಡಿದರು. ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆ ನೀಡಿದರು. ನಾವೆಲ್ಲರೂ ಕಾಪು ಕ್ಷೇತ್ರವನ್ನು ರಾಜ್ಯದ ನಂಬರ್ 1 ಕ್ಷೇತ್ರವನ್ನಾಗಿ ಮಾಡೋಣ ಎಂದರು. ಈ ಸಂಧರ್ಭ ಕಾಪು ವಿಧಾನಸಭಾ ಶಾಸಕ ಲಾಲಾಜಿ ಮೆಂಡನ್, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ದೆಹಲಿ […]
ಕಾಪು: ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಚಿತ್ರನಟಿ ತಾರ
ಕಾಪು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಪಕ್ಷದ ಸ್ಟಾರ್ ಪ್ರಚಾರಕಿ ತಾರ ಭೇಟಿ ನೀಡಿದರು. ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ; ಗೆಲುವಿಗಾಗಿ ಶ್ರಮ: ಲಾಲಾಜಿ ಮೆಂಡನ್
ಉಡುಪಿ: ವಿಧಾನಸಭಾ ಚುನಾವಣೆಗೆ ಕಾಪು ಕ್ಷೇತ್ರದಿಂದ ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಬಳಿಕ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದ್ದು ಅವರೊಂದಿಗಿನ ಮಾತುಕತೆ ಬಳಿಕ ಜಂಟಿ ಸುದ್ಧಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಾಲಾಜಿ ಮೆಂಡನ್, ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ. ಮುಂದೆಯೂ ಬಿಜೆಪಿ […]
ಕಾಪು: ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ನೇಮಕ
ಕರ್ನಾಟಕ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮುಂದಾಳುತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪರಿಶಿಷ್ಟ ಜಾತಿ ಪಂಗಡ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ಇವರನ್ನು ನೇಮಕ ಮಾಡಲಾಗಿದೆ. ಇವರು ಕಾಪು, ಉಡುಪಿ, ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ […]