ಕಾಪು: ಆರೋಗ್ಯ ಮಾಹಿತಿ ಹಾಗೂ ಆರೋಗ್ಯ ಕಾರ್ಡು ನೋಂದಣಿ ಕಾರ್ಯಕ್ರಮ

ಕಾಪು: ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಕಾಪು ಇದರ ಆಶ್ರಯದಲ್ಲಿ ಆರೋಗ್ಯ ಮಾಹಿತಿ ಹಾಗೂ ತಪಾಸಣಾ ಕಾರ್ಯಕ್ರಮ ಹಾಗೂ ಅರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮವು ಚಂದ್ರನಗರ ಬಟರ್ ಫ್ಲೈ ಗೆಸ್ಟ್ ಹೌಸ್ & ಪಾರ್ಟಿ ಹಾಲ್ ನ ಸಭಾಂಗಣದಲ್ಲಿ ಸಮಾಜ ಸೇವಕ ಫಾರೂಕ್ ಚಂದ್ರನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಕಾರ್ಡ್ ನೋಂದಣಿ ಮಾಡಲಾಯಿತು. ಈ ಸಂದರ್ಭದಲ್ಲಿ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ಸಮಾಜ ಸೇವಕ […]

ಕಾಪು ತೇಲುವ ರೆಸ್ಟೋರೆಂಟ್ ಹಾಗೂ ವಸತಿ ಗೃಹ ನಿಯಮ ಪರಿಶೀಲಿಸಿ ಮಂಜೂರಾತಿ

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಪು ತಾಲೂಕಿನ ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಮತ್ತು ವಸತಿ ಗೃಹವನ್ನು ನಿರ್ಮಾಣ ಮಾಡಲು, ನಿಗದಿತ ಶುಲ್ಕ ಪಾವತಿ ಬಗ್ಗೆ […]

ಕಾಪು: ವ್ಯಕ್ತಿ ನಾಪತ್ತೆ

ಕಾಪು: ಇಲ್ಲಿನ ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ […]

ಕಳತ್ತೂರು: ವಿಶ್ವ ಬಂಟರ ಪ್ರತಿಷ್ಠಾನ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಂಟ ಮಹಿಳೆಯರಿಗೆ ಮನೆ ನಿರ್ಮಾಣ

ಕಳತ್ತೂರು: ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಆಡಳಿತ ನಿರ್ದೇಶಕ ಶಶಿಕಿರಣ್ ಶೆಟ್ಟಿ ಇವರು ಮಂಗಳೂರಿನ ಉದ್ಯಮಿ ಎ.ಜೆ.ಶೆಟ್ಟಿ ಅಧ್ಯಕ್ಷತೆಯ ವಿಶ್ವ ಬಂಟರ ಪ್ರತಿಷ್ಠಾನಕ್ಕೆ 8 ಲಕ್ಷ ರೂ ಆರ್ಥಿಕ ಸಹಾಯ ನೀಡಿದ್ದು, ಆ ಮೂಲಕ ಆರ್ಥಿಕವಾಗಿ ಹಿಂದುಳಿದ ಬಂಟ ಮಹಿಳೆಯರಿಗೆ ಮನೆ ನಿರ್ಮಿಸಿಕೊಡಲಾಗಿದೆ. ಒಟ್ಟು 17 ಮನೆ ನಿರ್ಮಾಣಗೊಂಡಿದ್ದು ಅದರಲ್ಲಿ ಕಾಸರಗೋಡಿನಲ್ಲಿ 7, ಮಂಗಳೂರಿನಲ್ಲಿ 5, ಕುಂದಾಪುರದಲ್ಲಿ 1 ಹಾಗೂ ಕಾಪು ತಾಲೂಕಿನ ಕಳತ್ತೂರು ಗ್ರಾಮದಲ್ಲಿ 4 ಮನೆಗಳನ್ನು ನಿರ್ಮಿಸಲಾಗಿದೆ. ಮಂಗಳೂರಿನಲ್ಲಿ ನಡೆದ ವಿಶ್ವ ಬಂಟರ ಪ್ರತಿಷ್ಠಾನ […]

ಸರಕಾರಿ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸರಕಾರವು ಸಾರ್ವಜನಿಕರ ಅಭಿವೃದ್ದಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡು ಆ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಹಲವು ಯೋಜನೆಗಳ ಸಮಗ್ರ ಮಾಹಿತಿ ಪಡೆಯಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರದಂದು ಕಾಪು ತಾಲೂಕಿನ ಬೆಳ್ಳೆ ಗ್ರಾಮದ ಗೀತಾ ಮಂದಿರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮಸ್ಥರ […]