ಕಾಪು ಬ್ಲಾಕ್ ಕಾಂಗ್ರೆಸ್ ಕಛೇರಿ, “ರಾಜೀವ್ ಭವನ” ದಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ
ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಕಛೇರಿ, “ರಾಜೀವ್ ಭವನ” ದಲ್ಲಿ ನಡೆದ 77ನೇ ಸ್ವಾತ್ಪಂತ್ರ್ಯೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆಯವರು ನೆರವೇರಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಭಾಷಣದಲ್ಲಿ , ಭಾರತದ ಸಾರ್ವಭೌಮತೆ, ಅಖಂಡತೆ, ಸಮಾನತೆ, ಸಾಮರಸ್ಯತೆ ಮತ್ತು ಸಹೋದರತ್ವದ ಉಳಿವಿಗಾಗಿ ಭಾರತೀಯರಾದ ನಾವೆಲ್ಲರೂ ಪಣತೊಡಬೇಕು. ಅತಿದೊಡ್ಡ ಪ್ರಜಾಪ್ರಭುತ್ವ ದೇಶವೆನಿಸಿದ ಭಾರತದ ಸಂವಿಧಾನವನ್ನು ರಕ್ಷಿಸುವ ರಕ್ಷಕರಾಗಿ, ದ್ವೇಷ, ಹಿಂಸೆ ಮತ್ತು ಕೋಮುವಾದವನ್ನು ಹಿಮ್ಮೆಟ್ಟಿಸಿ, ವಿಶೇಷವಾಗಿ […]