ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ರಜತ ಪದಕ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್‌. ಎಸ್.‌ ಜೋಳದ್‌ ಮತ್ತು ಪ್ರಥಮ ವಿಜ್ಞಾನ ವಿಭಾಗದ ಸ್ತುತಿ.ಎಚ್‌.ಬಿ. ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿ ರಜಕ ಪದಕವನ್ನು ಪಡೆದು ತೀರ್ಪುಗಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿಯವರು ಅಭಿನಂದಿಸಿದ್ದು, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ […]

ಬಾಲಕಿಯರ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 6 ಮೆಟ್ರಿಕ್ ಪೂರ್ವ ಹಾಗೂ 14 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಕರಾಟೆ, ಜುಡೋ ಹಾಗೂ ಟೈಕ್ವಾಂಡೋಗಳಲ್ಲಿ ವಿಶೇಷ ಪರಿಣಿತಿ ಹೊಂದಿದ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. 40 ವರ್ಷದೊಳಗಿನ, ಬ್ಲ್ಯಾಕ್ ಬೆಲ್ಟ್ ಅರ್ಹತೆ ಹೊಂದಿರುವ, ನೊಂದಾಯಿತ ಕರಾಟೆ ಸಂಘದ ಸದಸ್ಯತ್ವ ಪಡೆದಿರುವ ಅರ್ಹ ಮಹಿಳಾ ತರಬೇತುದಾರರು ಆಗಸ್ಟ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. […]