ಜ.26 ರಂದು ಮಣಿಪಾಲ್ ಇನ್ ಹೊಟೇಲಿನಲ್ಲಿ ಬೃಹತ್ ರಕ್ತದಾನ ಶಿಬಿರ
ಉಡುಪಿ: ಗಣರಾಜ್ಯೋತ್ಸವ ಹಾಗೂ ಮಣಿಪಾಲ್ ಇನ್ ಹೋಟೇಲಿನ 3 ನೇ ವಾರ್ಷಿಕೋತ್ಸವದ ಪ್ರಯುಕ್ತ ಜ.26 ರಂದು ಮಣಿಪಾಲ್ ಇನ್ ಹೋಟೇಲಿನ 7 ನೇ ಮಹಡಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಡಳಿತ ನಿರ್ದೇಶಕ ಮೌಲಾನಾ ಇಬ್ರಾಹಿಂ ಗಂಗೊಳ್ಳಿ ಹೇಳಿದರು. ಅವರು ಇಂದು ಹೊಟೇಲಿನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಉದುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಬೆಳಿಗ್ಗೆ 7.30 ರಿಂದ 11.30 ರವರೆಗೆ ರಕ್ತದಾನ ಶಿಬಿರ […]
ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿ.27 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿ. 31 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು […]
ಡಿ.15 ರಿಂದ 31ರವರೆಗೆ ಶಕ್ತಿ ಮೋಟಾರ್ಸ್ ನಲ್ಲಿ ಸಾಲ ಮತ್ತು ವಿನಿಮಯ ಮೇಳ!
ಉಡುಪಿ: ಇಲ್ಲಿನ ಕರಾವಳಿ ಜಂಕ್ಷನ್ ಬಳಿ ಶ್ರೀ ರಾಮದರ್ಶನ ಕಟ್ಟಡದಲ್ಲಿ ಹೊಸದಾಗಿ ಪ್ರಾರಂಭವಾದ ಶಕ್ತಿ ಮೋಟಾರ್ಸ್ ದ್ವಿಚಕ್ರ ವಾಹನಗಳ ಮಳಿಗೆಯಲ್ಲಿ ಡಿ.15 ರಿಂದ 31ರವರೆಗೆ ಸಾಲ ಮತ್ತು ವಿನಿಮಯ ಮೇಳವನ್ನು ಆಯೋಜಿಸಲಾಗಿದೆ. ವಾಹನಗಳ ಮೇಲೆ ಕಡಿಮೆ ಮುಂಗಡ ಪಾವತಿ: 1999/- ರೂ ಎಲ್ಲಾ ಮಾಡೆಲ್ ಗಳಿಗೆ ವಿನಿಮಯ ಧಮಾಕಾ 3000+ ಜಾಕೆಟ್, ಹೆಲ್ಮೆಟ್ ಮತ್ತು ಎಲ್ಲಾ ಫಿಟ್ಟಿಂಗ್ಸ್ ಗಳೊಂದಿಗೆ ಒಟ್ಟು ಪ್ರಯೋಜನಗಳು: 6000+ ನಗದು ರಿಯಾಯಿತಿ 3000+ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7996855666, 0820-3500155 ನಂ: 27/3/573/1, […]
ಕರಾವಳಿ ಜಂಕ್ಷನ್ ನಿಂದ ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಪ್ರಾರಂಭ ಕುರಿತು ಸಭೆ
ಉಡುಪಿ: ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಇದರ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಸೋಮವಾರದಂದು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ವಿವಿಧ ಇಲಾಖಾಧಿಕಾರಿಗಳ ಸಭೆಯು ನಗರಸಭೆಯ ಸಭಾಭವನದಲ್ಲಿ ನಡೆಯಿತು. ರಸ್ತೆ ಕಾಮಗಾರಿಯ ಭೂಸ್ವಾಧೀನ 3ಡಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಕಾಮಗಾರಿ ಆರಂಭಿಸುವ ವಿಚಾರವಾಗಿ ಶಾಸಕರು, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ […]
ನ.6 ರಂದು ಉಡುಪಿಯಲ್ಲಿ ಹೀರೋ ಶಕ್ತಿ ಮೋಟರ್ಸ್ ನ ಕರಾವಳಿಯ ಪ್ರಪ್ರಥಮ ಶೋರೂಂ ಉದ್ಘಾಟನೆ
ಉಡುಪಿ: ಏಷಿಯಾ, ಆಫ್ರಿಕಾ, ದಕ್ಷಿಣ ಮತ್ತು ಮಧ್ಯ ಅಮೇರಿಕಾದಂತಹ 42 ದೇಶಗಳಲ್ಲಿ ತನ್ನ ವಿಸ್ತರಣೆಯನ್ನು ಹೊಂದಿರುವ ಹೀರೋ ಮೋಟರ್ ಕಾರ್ಪ್ ಸಂಸ್ಥೆಯು ಇದೇ ಮೊದಲ ಬಾರಿಗೆ ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ತನ್ನ ಪ್ರಪ್ರಥಮ ಶೋರೂಂ ಅನ್ನು ಕರಾವಳಿ ಜಂಕ್ಷನ್ ಬಳಿಯಿರುವ ಶ್ರೀ ರಾಮದರ್ಶನ ಕಟ್ಟಡದಲ್ಲಿ ತೆರೆಯಲಿದ್ದು, ಇದರ ಉದ್ಘಾಟನಾ ಸಮಾರಂಭವು ನ.6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಶಾಸಕ ರಘುಪತಿ ಭಟ್ ಉದ್ಘಾಟನಾ ಕಾರ್ಯವನ್ನು ನೆರವೇರಿಸಲಿದ್ದಾರೆ […]