ಕರಾವಳಿಯಲ್ಲಿ ₹ 3986 ಕೋಟಿ ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟು: ಸಚಿವ ಮಾಧುಸ್ವಾಮಿ

ಉಡುಪಿ: ರಾಜ್ಯಾದ್ಯಂತ ಅಂರ್ತಜಲವನ್ನು ಹೆಚ್ಚಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿ ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು. ಅವರು ಮಂಗಳವಾರ ಬೈಂದೂರಿನ ಪಡುವರಿಯಲ್ಲಿ ₹ 35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಿಂಡಿ ಅಣೆಕಟ್ಟು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಕೃಷಿ ಮತ್ತು ಕುಡಿಯುವ ನೀರು ಉದ್ದೇಶಕ್ಕಾಗಿ ₹3986 ಕೋಟಿ ವೆಚ್ಚದಲ್ಲಿ 1348 ಕಿಂಡಿ […]