ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ತಣ್ಣೀರಬಾವಿ ಕಡಲ ತೀರದಲ್ಲಿ ಕರಾವಳಿ ಉತ್ಸವ

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಕರಾವಳಿ ಉತ್ಸವವನ್ನು ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ತಣ್ಣೀರಬಾವಿ ಕಡಲ ತೀರದಲ್ಲಿ ಆಯೋಜಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಮತ್ತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವದ ಸುಗಮ ನಿರ್ವಹಣೆಗೆ ವಿವಿಧ ಸಮಿತಿಗಳು ಹಾಗೂ ಉಪಸಮಿತಿಗಳನ್ನು ಶೀಘ್ರ ರಚಿಸಲಾಗುವುದು ಎಂದರು. ಈ ಪ್ರದೇಶದ […]