ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಕೆ: ಕದ್ರಾ ಜಲಾಶಯದಿಂದ ನೀರು ಬಿಡುಗಡೆ
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಎಲ್ಲ ನದಿಗಳು ತುಂಬಿ ಹರಿಯಲಾರಂಭಿಸಿವೆ. ಕಾಳಿ ನದಿಗೆ ನಿರಂತರವಾಗಿ ನೀರು ಹರಿದುಬರುತ್ತಿರುವ ಕಾರಣ, ಕದ್ರಾ ಜಲಾಶಯದಿಂದ ಮೂರನೇ ದಿನವೂ ನೀರು ಹೊರಬಿಡಲಾಗಿದೆ. ಬೊಮ್ಮನಳ್ಳಿ ಜಲಾಶಯದಿಂದಲೂ ನೀರು ಹೊರಬಿಡುವ ಮುನ್ಸೂಚನೆ ನೀಡಿರುವುದು ಇದೀಗ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಉತ್ತರಕನ್ನಡದಲ್ಲಿ ಗಾಳಿ ಸಹಿತ ಭಾರಿ ಮಳೆ ಮುಂದುವರೆದಿದೆ. ಇದೀಗ ಕುಮಟಾ ಪಟ್ಟಣದಲ್ಲಿ ಗಂಗಾಧರ ಗೌಡ ಹಾಗೂ ಗಣೇಶ ಗೌಡ ಅವರ ಮನೆ ಮೇಲೆ ಬೃಹತ್ ಆಲದ […]