ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಗಣೇಶ‌ ಮೊಗವೀರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಭಾರತೀಯ ಸೇನೆಯ  ನಿವೃತ್ತ  ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ.ಪಿ. ಮಾತನಾಡಿ ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನೆನಪುಗಳೊಂದಿಗೆ ಯುದ್ಧದ ಕುರಿತಾದ ಸಂಪೂರ್ಣ ಮಾಹಿತಿ ನೀಡಿದರು. ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಹಾಗೂ ರಸಾಯನಶಾಸ್ತ್ರ ಉಪನ್ಯಾಸಕ ಡಾ. ಮಂಜುನಾಥ ಗಾಣಿಗ, ಕಾರ್ಯದರ್ಶಿ ಹಾಗೂ […]

ಕರಾವಳಿಯಲ್ಲಿ‌ ಕಾರ್ಗಿಲ್ ವಿಜಯ ದಿವಸ್: ಯೋಧರಿಗೆ ನಮನ

ಉಡುಪಿ/ಮಂಗಳೂರು: ಸ್ವಚ್ಛ ಭಾರತ್ ಫ್ರೆಂಡ್ಸ್ ಮತ್ತು ಜೆಸಿಐ ಉಡುಪಿ ಸಿಟಿ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಇದರ ೨೦ನೇ ವರ್ಷಾಚರಣೆ ಹಾಗೂ ಯೋಧ ನಮನ ಕಾರ್ಯಕ್ರಮವು ಜು. ೨೬ ರಂದು ಅಜ್ಜರಕಾಡು ಹುತಾತ್ಮ ಸ್ಮಾರಕದಲ್ಲಿ ನಡೆಯಿತು. ಸೈನ್ಯದಲ್ಲಿ ಸುದೀರ್ಘ ೨೪ ವರ್ಷಗಳ ಕಾಲ ಸೇವೆ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿ ಸತತವಾಗಿ ೨೧ ದಿನಗಳ ಕಾಲ ಗಡಿಯಲ್ಲಿ ಬಂಕರ್ ನಲ್ಲಿಯೇ ಆಶ್ರಯಪಡೆದುಕೊಂಡು ಅಲ್ಲಿಂದಲೇ ಕೆಚ್ಚೆದೆಯ ಹೋರಾಟವನ್ನು ಪ್ರದರ್ಶಿಸಿದ ನಿವೃತ್ತ ಯೋಧ ಜಗದೀಶ್ ಪ್ರಭು ಹಿರಿಯಡ್ಕ ಅವರನ್ನು ಸನ್ಮಾನಿಸಲಾಯಿತು. ಅನಂತರ […]