ಕಾರ್ಕಡ ಗೆಳೆಯರ ಬಳಗ ಕಾರಂತ ಪುರಸ್ಕಾರ

ಕೋಟ: ರವೀಂದ್ರನಾಥ ಠಾಗೂರರ ಅನಂತರ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ ಭಾರತೀಯನಿದ್ದರೆ ಅದು ಶಿವರಾಮ ಕಾರಂತರು ಎಂದು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅಭಿಪ್ರಾಯಪಟ್ಟರು. ಅವರು ಸಾಲಿಗ್ರಾಮ-ಕಾರ್ಕಡ ಗೆಳೆಯರ ಬಳಗದ ಆಶ್ರಯದಲ್ಲಿ ಅ.೧೩ರಂದು ಕಾರ್ಕಡ ಹಿ.ಪ್ರಾ.ಶಾಲೆಯಲ್ಲಿ ನಡೆದ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ, ಕಾರಂತ ಸಂಸ್ಮರಣೆ ಮತ್ತು ಗೆಳೆಯರ ಕಾರಂತ ಪುರಸ್ಕಾರ ಸಮಾರಂಭದಲ್ಲಿ ಗೆಳೆಯರ ಬಳಗ ಕಾರಂತ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು. ಕರ್ಣಾಟಕ ಬ್ಯಾಂಕ್‌ನ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕ ಬಿ.ಗೋಪಾಲಕೃಷ್ಣ ಸಾಮಗ ಕಾರ್ಯಕ್ರಮಕ್ಕೆ ಚಾಲನೆ […]