ಅಜೆಕಾರು: ಶಾಲೋಮ್ ಪ್ರಗತಿ ವಾಣಿಜ್ಯ ಸಂಕೀರ್ಣ ಹಾಗೂ ವಸತಿ ಸಮುಚ್ಚಯ ಉದ್ಘಾಟನೆ

ಅಜೆಕಾರು: ಅಜೆಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲೋಮ್ ಪ್ರಗತಿ ವಾಣಿಜ್ಯ ಸಂಕೀರ್ಣ ಹಾಗೂ ವಸತಿ ಸಮುಚ್ಚಯದ ಉದ್ಘಾಟನಾ ಕಾರ್ಯಕ್ರಮವು ಏ.14ರಂದು ನಡೆಯಿತು. ವಾಣಿಜ್ಯ ಸಂಕೀರ್ಣ ಮಾತು ವಸತಿ ಸಮುಚ್ಚಯವನ್ನು ಅಜೆಕಾರು ಸೇಕ್ರೆಡ್ ಹಾರ್ಟ್ ನ ಧರ್ಮ ಗುರುಗಳಾದ ಪ್ರವೀಣ್ ಅಮೃತ್ ಮಾರ್ಟಿಸ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಳ್ಳಿಯ ಜನರು ಯಾವುದೇ ಸವಲತ್ತುಗಳಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಶಾಲೋಮ್ ಪ್ರಗತಿ ವಾಣಿಜ್ಯ ಸಂಕೀರ್ಣದಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಈ ಉದ್ಯಮ ಕೇವಲ ವಾಣಿಜ್ಯ ಚಟುವಟಿಕೆಗೆ ಸೀಮಿತವಾಗದ ಸಮಾಜವನ್ನು […]
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಬೆಳ್ತಂಗಡಿ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಇವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜೊತೆಗಿದ್ದರು.
ಅಜೆಕಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ

ಅಜೆಕಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಮಂಗಳವಾರದಂದು ನಡೆಯಿತು. ನೂತನ ರಥ ಸಮರ್ಪಣೆ ಬಳಿಕ ದೇವಸ್ಥಾನದಲ್ಲಿ ಆಶ್ಲೇಷಾ ಬಲಿ, ಚಂಡಿಕಾಯಾಗ, ರಂಗಪೂಜೆ, ಗಣಹೋಮ ಸಹಿತ ಧಾರ್ಮಿಕ ವಿಧಿವಿಧಾನಗಳು ವೇ.ಮೂ ಕೊರಂಗ್ರಪಾಡಿ ವಾದಿರಾಜ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೆಂಕಟರಮಣ ಭಟ್ ಪೌರೋಹಿತ್ಯದಲ್ಲಿ ನೆರವೇರಿತು. ಸೋಮವಾರ ರಾತ್ರಿ ರಥೋತ್ಸವ, ಕೆರೆದೀಪ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿವರಾಮ ಜಿ.ಶೆಟ್ಟಿ, ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಕುಂಟಿನಿ, ಕೋಶಾಧಿಕಾರಿ ಜಯಕರ ಶೆಟ್ಟಿ, ವಿಜಯ ಶೆಟ್ಟಿ, ಹರೀಶ್ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮ

ಕಾರ್ಕಳ: ವಿಶೇಷ ಪರಿಶ್ರಮದಿಂದ ಕೂಡಿದ ಪ್ರಯತ್ನ ಯಶಸ್ಸನ್ನು ದೊರಕಿಸಿಕೊಡುತ್ತದೆ. ತನ್ಮೂಲಕ ವಿಶ್ವವ್ಯಾಪಿಯನ್ನಾಗಿಸಿ ಪ್ರಪಂಚವನ್ನು ಆಳಲು ತೊಡಗುತ್ತದೆ. ಆದ್ದರಿಂದ ಕ್ರಿಯಾಶೀಲತೆಯೇ ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ, ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಮಾತನಾಡಿ ಸಾಧನೆಯ ಕಡೆಗೆ ತುಡಿತ, ಅವಕಾಶವನ್ನು ಸೃಷ್ಟಿಸುವುದು ನಮ್ಮ ಗುರಿಯಾಗಬೇಕೆಂದು ಕರೆ ನೀಡಿದರು. ಪ್ರಾಂಶುಪಾಲ ವಿದ್ವಾನ್ […]
ಕೃಷಿಗೆ ಸಾಂಸ್ಥಿಕ ಸ್ಪರ್ಶ ನೀಡಿ ಮುನಿಯಾಲಿನ ಮಣ್ಣನ್ನು ಗೋಧಾಮದ ಮೂಲಕ ಪಾವನಗೊಳಿಸಿದ ರೀತಿ ಎಲ್ಲರಿಗೂ ಮಾದರಿ: ರಾಜಶೇಖರಾನಂದ ಸ್ವಾಮೀಜಿ

ಹೆಬ್ರಿ : ಆಧುನಿಕ ಯುಗದಲ್ಲೂ ಕೃಷಿಯ ಮೂಲಕ ಜೀವನವನ್ನು ನಡೆಸಬಹುದು ಎನ್ನುವ ಸಂದೇಶವನ್ನು ಜಗತ್ತಿಗೆ ಸಾರಿ, ಕೃಷಿಗೆ ಸಾಂಸ್ಥಿಕ ಸ್ಪರ್ಶ ನೀಡಿ ಮುನಿಯಾಲಿನ ಮಣ್ಣನ್ನು ಗೋಧಾಮದ ಮೂಲಕ ಪಾವನಗೊಳಿಸುವ ಮಹಾತ್ಕಾರ್ಯವನ್ನು ವಿಭಿನ್ನ ಯೋಚನೆ ಯೋಜನೆಯ ಸಾಧಕ ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಅವರು ಭಾನುವಾರ ಮುನಿಯಾಲಿನಲ್ಲಿರುವ ಭಾರತೀಯ ಗೋತಳಿಗಳ ಅಭಿವೃದ್ಧಿ ಕೇಂದ್ರ ಸಂಜೀವಿನಿ ಫಾರ್ಮ್ ಮತ್ತು ಡೈರಿ ಗೋಧಾಮದಲ್ಲಿ […]