ಕಾರ್ಕಳ: ವ್ಯಕ್ತಿ ನಾಪತ್ತೆ

ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ನಿವಾಸಿ ಉದಯ್ ಕುಮಾರ್ (38) ಎಂಬವರು ಮಾರ್ಚ್ 25 ರಂದು ತಂದೆಯ ಮನೆಯಾದ ಕಾಂತಾವರ ಗ್ರಾಮದ ಬೇಲಾಡಿಯ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಕಳ: ಏಪ್ರಿಲ್ 1 ರಿಂದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗದ ಸಮಯ ಬದಲಾವಣೆ

ಕಾರ್ಕಳ: ಇಲ್ಲಿನ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊಸ ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಹಲವು ಸೌಲಭ್ಯಗಳ ಸೇರ್ಪಡೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಜ್ಞ ವೈದ್ಯರ ಸೇರ್ಪಡೆಯೊಂದಿಗೆ 24*7 ಅಪಘಾತ ಮತ್ತು ತುರ್ತು ಚಿಕಿತ್ಸಾ ಸೌಲಭ್ಯವನ್ನು ಆರಂಭಿಸಲಾಗುವುದು. ಇದೀಗ ಸಾರ್ವಜನಿಕರ ಅಪೇಕ್ಷೆ ಮೇರೆಗೆ ಮತ್ತು ಅವರ ಅನುಕೂಲಕ್ಕಾಗಿ ಆಸ್ಪತ್ರೆಯ ಹೊರರೋಗಿ ವಿಭಾಗದ ವೈದ್ಯರ ಸಮಾಲೋಚನೆ ಸಮಯವನ್ನು ಬದಲಾಯಿಸಿಲಾಗಿದ್ದು, ಏಪ್ರಿಲ್ 1 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಅಪರಾಹ್ನ 3.30 […]

ಪರ್ಪಲೆ ಗಿರಿಯಲ್ಲಿ ಹೈ ಮಾಸ್ಟ್ ದೀಪ ಅಳವಡಿಕೆ

ಕಾರ್ಕಳ:   ಶ್ರೀ ಕ್ಷೇತ್ರ ಅತ್ತೂರು ಪರ್ಪಲೆ ಗಿರಿಯಲ್ಲಿ ದಾನಿಗಳೊಬ್ಬರು ಕೂಡ ಮಾಡಿದ ಹೈಮಾಸ್ಟ್ ದೀಪವನ್ನು  ರಾಮನವಮಿಯ ಪುಣ್ಯ ದಿನದಂದು ಅಳವಡಿಸಲಾಯಿತು. ಬಾಲಾಜಿ ಶಿಬಿರದ ಗುರುಸ್ವಾಮಿ ಬಾಲಕೃಷ್ಣ ಹೆಗ್ಡೆಯವರು ಗುಂಡಿಯನ್ನು ಒತ್ತುವುದರ ಮೂಲಕ ಉದ್ಘಾಟನೆ ಮಾಡಿದರು.   ಈ ಸಂದರ್ಭ ಟ್ರಸ್ಟಿಗಳಾದಂತಹ ಪ್ರಶಾಂತ್ ನಾಯಕ್, ಚಂದ್ರಶೇಖರ್ ಶೆಟ್ಟಿ ಪುನರತ್ಥಾನ ಸಮಿತಿಯಲ್ಲಿರುವ ಬೋಳ ಪ್ರಶಾಂತ್ ಕಾಮತ್, ನಿತ್ಯಾನಂದ ಪೈ, ಹಿಂ.ಜಾ.ವೇ ಸಂಘಟನೆಯ ಪ್ರಮುಖರಾದ ಪ್ರಕಾಶ್ ಕುಕ್ಕೆಹಳ್ಳಿ, ರಮೇಶ್ ಕಲ್ಲೊಟ್ಟೆ, ಗುರುಪ್ರಸಾದ್ ನಾರಾವಿ , ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಕಾರ್ಕಳ: ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಉಡುಪಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ರವಿವಾರ ಕಾರ್ಕಳ ಬೈಲೂರು ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕಿನಲ್ಲಿ ನಡೆಯಿತು. ಯಕ್ಷರಂಗಾಯಣ ಅಧ್ಯಕ್ಷ ಜೀವನ್ ರಾಂ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಪೂಜಾರಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ, ಎರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ […]

ಜೆ.ಇ.ಇ.ಮೈನ್-ಬಿ.ಆರ್ಕ್ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ :ರಾಷ್ಟ್ರಮಟ್ಟದಲ್ಲಿಎನ್.ಟಿ.ಎ ನಡೆಸಿದ ಜೆ.ಇ.ಇ ಮೈನ್ – ಬಿ.ಆರ್ಕ್ ಪರೀಕ್ಷೆಯಲ್ಲಿಗಣಿತನಗರದ ಕಾರ್ಕಳ ಜ್ಞಾನಸುಧಾ ಪಿ.ಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್, 6 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀಕಾಂತ್.ಎಚ್. 99.64 ಪರ್ಸಂಟೈಲ್ ಹಾಗೂ ಚಮನ್ ಡಿ.ಪಿ 99.32 ಪರ್ಸಂಟೈಲ್ ಗಳಿಸುವುದರ ಜೊತೆಗೆ, ಸೂರ್ಯ ವಿ. 96.67 ಅಖಿಲ್‌ ದಯಾನಂದ ನಾಯಕ್ 92.22 ಶ್ರೀರಾಮ್ ಗಜಾನನ ಪಟಗಾರ್ 92.22 ಅಮೋಘ ಎಸ್.ಆರ್.91.84 ಪರ್ಸಂಟೈಲ್ ಗಳಿಸಿದ್ದಾರೆ. ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ […]