ಬೆಳ್ಮಣ್: ಫೆಬ್ರವರಿ 20 ರಂದು ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ

ಬೆಳ್ಮಣ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಹಶೀಲ್ದಾರರು ಕಂದಾಯ ಅಧಿಕಾರಿಗಳೊಂದಿಗೆ ಫೆಬ್ರವರಿ 20 ರಂದು ಬೆಳಗ್ಗೆ 10.30 ಕ್ಕೆ ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೂಡ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸೂಡ ಗ್ರಾಮದ ಗ್ರಾಮಸ್ಥರು ಕಂದಾಯ, ಪಂಚಾಯತ್ ರಾಜ್, ಆಹಾರ, ಸರ್ವೇ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ಅದನ್ನು ನೀಡಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಹಾಗೂ ಸದ್ರಿ ಇಲಾಖೆಗಳಡಿ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳ ಮಾಹಿತಿಯನ್ನು […]
ಗೋಸಾಕಣೆ ಹಾಗೂ ಕೃಷಿ ಕ್ಷೇತ್ರ ಲಾಭದಾಯಕ ಎನ್ನುವುದಕ್ಕೆ ಮುನಿಯಾಲು ಗೋಧಾಮ ಸಾಕ್ಷಿ: ಡಾ. ಎಚ್. ಎಲ್ ಮಂಜುನಾಥ್

ಕಾರ್ಕಳ: ಮುನಿಯಾಲು ಗೋಧಾಮಕ್ಕೆ ಭೇಟಿ ನೀಡಿರುವುದು ಅಮೂಲ್ಯ ಕ್ಷಣ. ಒಬ್ಬ ಕೈಗಾರಿಕೋದ್ಯಮಿ ಪರಿಸರ ಪ್ರೇಮಿಯಾಗಿ ದೇಶೀಯ ಗೋವುಗಳ ಜೊತೆ ಕೃಷಿಯನ್ನು ಕೂಡಾ ಹೇಗೆ ಮಾಡಬಹುದೆಂದು ತೋರಿಸಿಕೊಟ್ಟಿರುವ ರೀತಿ ಎಲ್ಲರಿಗೂ ಮಾದರಿ. ಕೃಷಿಕರು ಸರಿಯಾದ ನಿಟ್ಟಿನಲ್ಲಿ ಯೋಚಿಸಿ ಕೃಷಿ ಮಾಡಿದಲ್ಲಿ ಈ ಕ್ಷೇತ್ರವೂ ಲಾಭಾದಾಯಕವಾಗಲಿದೆ ಎನ್ನುವುದಕ್ಕೆ ಮುನಿಯಾಲು ಗೋಧಾಮ ಸಾಕ್ಷಿಯಾಗಿ ನಿಂತಿದೆ. ಇಲ್ಲಿನ ಗೋಧಾಮ ಗೋಲೋಕವನ್ನೇ ಸೃಷ್ಟಿಸಿದ್ದು, ದೇಶಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್. ಎಲ್ […]
ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು: ವಿ.ಸುನೀಲ್ ಕುಮಾರ್

ಕಾರ್ಕಳ: ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಂಡು ವಿದ್ಯಾವಂತ ಮತ್ತು ಸಂಸ್ಕಾರವಂತರಾಗಬೇಕು ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ”ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ವಿ.ಟಿ. ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಪಿ.ಶೆಣೈ […]
ಕಾರ್ಕಳ ಎಂ.ಪಿ.ಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ‘ಎ’ ಗ್ರೇಡ್ ಮಾನ್ಯತೆ

ಕಾರ್ಕಳ: ದೇಶದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮೌಲ್ಯಮಾಪನ ಮಾಡುವ ಪ್ರತಿಷ್ಠಿತ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ(ನ್ಯಾಕ್) ಯಿಂದ ಎಂ.ಪಿ.ಎಂ ಸ.ಪ್ರ.ದ ಕಾಲೇಜಿನಲ್ಲಿ ಫೆಬ್ರವರಿ 1 ಮತ್ತು 2 ರಂದು ಸಮಗ್ರ ಮೌಲ್ಯಮಾಪನವು ನಡೆದು ಕಾಲೇಜಿಗೆ ‘ಎ’ ಗ್ರೇಡ್ ಮಾನ್ಯತೆ ಲಭಿಸಿರುತ್ತದೆ. ಒಟ್ಟು ಸಿಜಿಪಿಎ 4 ರಲ್ಲಿ 3.21 ಅಂಕಗಳನ್ನು ಪಡೆದ ಈ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗ್ರ ಸ್ಥಾನಿಯಾಗಿರುತ್ತದೆ. ನ್ಯಾಕ್ ತಂಡದಲ್ಲಿ ಖ್ಯಾತ ಶಿಕ್ಷಣ ತಜ್ಞ, ಹಿಮಾಚಲ ಪ್ರದೇಶದ […]
ಸಿ.ಎ ಫೌಂಡೇಶನ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜಿನ ದೀಕ್ಷಾಆಚಾರ್ಯ ಹಾಗೂ ಶ್ರಾವ್ಯಾ ಸಿ.ಎಸ್ ಉತ್ತೀರ್ಣ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ. ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ ಜೂನ್ ತಿಂಗಳಲ್ಲಿ ನಡೆಸಿದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ […]