ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆ: ಬಿಜೆಪಿಯಿಂದ ಬೆಂಬಲದ ನಿರೀಕ್ಷೆ

ಕಾರ್ಕಳ: ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್, ಹಿಂದೂ ಸಮಾಜದ ಶ್ರೇಯಸ್ಸಿಗಾಗಿ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ತನ್ನನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಮುತಾಲಿಕ್ ರವರು 47 ವರ್ಷಗಳಿಂದ ಮನೆ ಮಠ ಕುಟುಂಬವನ್ನು ತ್ಯಜಿಸಿ ದೇಶ ಮತ್ತು ಧರ್ಮ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ರಾಜಕೀಯ ಅವಕಾಶಗಳಿದ್ದಾಗಲೂ ತಿರಸ್ಕರಿಸಿ ಸಂಘಟನೆಯಲ್ಲಿ ತೊಡಗಿಸಿಕೊಂಡು ದೇಶ […]
ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಉತ್ಸವಗಳು ಸಹಕಾರಿ: ವಿ. ಸುನಿಲ್ ಕುಮಾರ್

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಾಗೂ ಉಡುಪಿ ಜಿಲ್ಲಾ ರಜತಮಹೋತ್ಸವದ ಸಮಾರೋಪವು ಏಕಕಾಲದಲ್ಲಿ ನಡೆಯುತ್ತಿರುವುದು ಸಂತಸದ ವಿಚಾರ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಪರಶುರಾಮ ಥೀಂ ಪಾರ್ಕ್ ನ ಸಮಾರೋಪ ಸಮಾರಂಭ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಉತ್ಸವಗಳು ಸಹಕಾರಿಯಾಗಿದೆ. ರಾಜ್ಯದಲ್ಲಿ ಕಾರ್ಕಳ ಬ್ರಾಂಡ್ ನಿರ್ಮಾಣವಾಗಬೇಕು. ತಾಲೂಕಿನ ಉತ್ಸಾಹದ ಮೂಲಕ ರಾಜ್ಯದಲ್ಲೆಲ್ಲ ಉತ್ಸಾಹ ಮೂಡುವಂತೆ ಮಾಡಿದೆ. ಕ್ಷೇತ್ರದ ಮೂಲ ಸೌಕರ್ಯಗಳನ್ನು ಒದಗಿಸುವ […]
ಕಾರ್ಕಳ: ಸ್ವರಾಜ್ಯ ಮೈದಾನದಲ್ಲಿ ಪೊಲೀಸ್ ಬ್ಯಾಂಡ್; ಪಂಜಿನ ಕವಾಯತು

ಕಾರ್ಕಳ: ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಿಗೆ ಸೀಮಿತವಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಪಂಜಿನ ಕವಾಯತು ಕಾರ್ಯಕ್ರಮವನ್ನು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ನಡೆಸಲಾಗಿದ್ದು, ಇದು ಸ್ವರ್ಣ ಕಾರ್ಕಳಕ್ಕೆ ಇನ್ನಷ್ಟು ಗರಿಮೆ, ಹೊಸತನ ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ ನಿಮಿತ್ತ ಆಯೋಜಿಸಲಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೇರು ನಿಗಮದ ಅಧ್ಯಕ್ಷ […]
ಕಾರ್ಕಳ: ಬಗೆಬಗೆ ಮೀನಿನ ಖಾದ್ಯ ಸವಿದ ತುಳುನಾಡಿಗರು

ಕಾರ್ಕಳ: ಜ. 26 ರಿಂದ 30 ರ ವರೆಗೆ ಕಾರ್ಕಳದ ಯರ್ಲಪಾಡಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಲ್ಪೆ ಮೀನುಗಾರರ ಉತ್ಪಾದಕ ಕಂಪನಿಯು ಆಹಾರ ಮಳಿಗೆ ಮತ್ತು ಕಂಪನಿಯ ಉತ್ಪನ್ನಗಳ ಪ್ರದರ್ಶನ ಮಳಿಗೆ ಹಾಕಿದ್ದು, ಕಂಪನಿಯ ಮೀನುಗಾರ ಮಹಿಳೆಯರು, ಆಹಾರ ಮಳಿಗೆಯಲ್ಲಿ ವಿವಿಧ ಮೀನಿನ ಖಾದ್ಯಗಳು, ಶುಚಿ ರುಚಿಯಾದ ಅಡುಗೆಗಳನ್ನು ಮಾರಾಟಕ್ಕಿಟ್ಟಿದ್ದರು. ಉತ್ಪನ್ನಗಳ ಪ್ರದರ್ಶನದ ಮಳಿಗೆಯಲ್ಲಿ ಕಂಪನಿಯ ಸದಸ್ಯರು ತಯಾರಿಸಿದ ಮೀನಿನ ಉಪ್ಪಿನಕಾಯಿ, ಚಟ್ನಿ ಪುಡಿ, ಒಣ ಮೀನು, ಮೀನಿನ ಚಕ್ಕುಲಿ, ಮೀನಿನ ಹಪ್ಪಳ […]
ಮುಂದಿನ ಬಾರಿ ಚುನಾಯಿತನಾದರೆ ರಾಮಸಮುದ್ರ ಪ್ರವಾಸಿತಾಣವಾಗಿ ನಿರ್ಮಾಣ: ವಿ.ಸುನಿಲ್ ಕುಮಾರ್

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ನಲ್ಲಿ ಭಜನಾ ಮಂದಿರ ನಿರ್ಮಾಣವಾಗುವ ಮೂಲಕ ಆಧ್ಯಾತ್ಮಿಕ ಮತ್ತು ಧಾರ್ಮಿಕ ಭಾವನೆ ಉಂಟಾಗಿದೆ. ಜನರಿಂದ ಆಯ್ಕೆಯಾದ ಬಳಿಕ ಮೂಲಸೌಕರ್ಯಕ್ಕೆ ಸೀಮಿತವಾಗಿ ಕೆಲಸ ಮಾಡಿಲ್ಲ. ಪ್ರವಾಸೋದ್ಯಮವೂ ಸೇರಿದಂತೆ ಎಲ್ಲ ಆಯಾಮಗಳಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಿದ್ದು, ಮುಂದಿನ ಬಾರಿ ಚುನಾಯಿತಗೊಂಡರೆ ಮುಂದಿನ ಎರಡು ವರ್ಷಗಳೊಳಗೆ ಕಾರ್ಕಳದ ಐತಿಹಾಸಿಕ ರಾಮಸಮುದ್ರವನ್ನು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿ ಮಾಡುತ್ತೇನೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರದಂದು ಕಾರ್ಕಳದ ಪರಶುರಾಮ […]