ಅತ್ತೂರು: ಸಂತ ಲಾರೆನ್ಸ್ ಚರ್ಚಿನಲ್ಲಿ ಮೂರನೇ ದಿನದ ಬಲಿಪೂಜೆ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾ ವಾರ್ಷಿಕ ಮಹೋತ್ಸವದ ಮೂರನೇ ದಿನದಂದು ಸಹಸ್ರಾರು ಭಕ್ತರು ಪ್ರಾರ್ಥನೆ ಮತ್ತು ಬಲಿಪೂಜೆಯಲ್ಲಿ ಪಾಲ್ಗೊಂಡರು. ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಡಾ.ಲಾರೆನ್ಸ್ ಮುಖುಯಿ ಅವರು ಮೂರನೇ ದಿನದ ಮುಖ್ಯ ಬಲಿಪೂಜೆಯನ್ನು ನೆರವೇರಿಸಿದರು. ಲೌಕಿಕ ನೋವುಗಳು ಮತ್ತು ಕಷ್ಟಗಳು ನಮ್ಮನ್ನು ದುರ್ಬಲಗೊಳಿಸುತ್ತವೆ. ಆದರೆ ಪವಿತ್ರಾತ್ಮದ ಅನುಗ್ರಹದಿಂದ ಮತ್ತು ಸರ್ವಶಕ್ತನನ್ನು ಸಂಪೂರ್ಣವಾಗಿ ನಂಬುವ ಮೂಲಕ, ಆತನ ಸಾಕ್ಷಿಯಾಗುವುದರಿಂದ, ನಾವು ಆಶೀರ್ವದಿಸಲ್ಪಡುತ್ತೇವೆ ಎಂದು ಅವರು ಧರ್ಮಬೋಧನೆ ನೀಡಿದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫಾದರ್ ಮ್ಯಾಕ್ಸಿಂ ನೊರೊನ್ಹಾ […]

ಕಾರ್ಕಳ: ಜ. 25 ರಿಂದ ಫೆ. 3 ರ ವರೆಗೆಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಕಾರ್ಕಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ಭಾರತ ಸರಕಾರ- ಗಾಂಧಿ ಶಿಲ್ಪ್ ಬಝಾರ್, ಕರ್ನಾಟಕ ಸರಕಾರದ ಕರಕುಶಲ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ ಇವರ ಸಹಯೋಗದೊಂದಿಗೆ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆಯ ಪ್ರಯುಕ್ತ ಜನವರಿ 25 ರಿಂದ ಫೆಬ್ರವರಿ 3 ರ ವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಕರಕುಶಲ ವಸ್ತುಗಳ ಮತ್ತು ಸಂಜೀವಿನಿ ಸ್ವ- ಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ […]

ಕಾರ್ಕಳ: ಜ.20 ರಂದು ವಿದ್ಯುತ್ ವ್ಯತ್ಯಯ

ಕಾರ್ಕಳ: ಜನವರಿ 20 ರಂದು 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಪರಶುರಾಮ ಥೀಮ್ ಪಾರ್ಕಿನ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್ ಫೀಡರ್‌ಗಳ ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಜ.19 ರಂದು ಪರಶುರಾಮ ದೌಡ್

ಕಾರ್ಕಳ: ಜ.19 ರಂದು ಪರಶುರಾಮ ದೌಡ್ ಆಯೋಜಿಸಲಾಗಿದ್ದು, ಮಧ್ಯಾಹ್ನ 2.30 ಕಾರ್ಕಳ ಮುಖ್ಯ ಬಸ್ ನಿಲ್ದಾಣದಿಂದ ಹೊರಟು ಸಂಜೆ 6 ಗಂಟೆಗೆ ಪರಶುರಾಮ ಥೀಮ್ ಪಾರ್ಕ್ ಗೆ ತಲುಪಲಿದೆ. ಜ.27 ರಂದು ಪರಶುರಾಮ ಪ್ರತಿಮೆ ಲೋಕಾರ್ಪಣೆಗೊಳ್ಳಲಿದ್ದು, ಅಂದು ಶಂಖನಾದ ಮೊಳಗಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆಸಕ್ತರು ತಮ್ಮ ಹೆಸರನ್ನು ಜ.21 ರೊಳಗೆ 8050175917 ಈ ಸಂಖ್ಯೆಗೆ ವಾಟ್ಸಾಪ್ ಮಾಡಿ ತಿಳಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9845333471, 9945666417, 8749009794, 9845117643, 9844173421 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಕಾರ್ಕಳ: ಇಂದು ಸಂಜೆ ಕಲ್ಯಾ ಗ್ರಾಮ ಪಂಚಾಯತ್ ನೂತನ ಕಛೇರಿ ಕಟ್ಟಡದ ಉದ್ಘಾಟನೆ

ಕಲ್ಯಾ: ಇಂದು ಸಂಜೆ 6ಕ್ಕೆ ಶ್ರೀ ರಾಜಶೇಖರಾನಂದ ಸ್ವಾಮೀಜಿ, ವಜ್ರದೇಹಿ ಮಠ, ಗುರುಪುರ ಇವರ ಶುಭಾಶಿರ್ವಾದ ಮತ್ತು ದಿವ್ಯ ಉಪಸ್ಥಿತಿಯೊಂದಿಗೆ ಕಲ್ಯಾಗ್ರಾಮ ಪಂಚಾಯತ್ ನ ನೂತನ ಕಚೇರಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಜರಗಲಿರುವುದು. ಗ್ರಾಮ ಪಂಚಾಯತ್ ಕಾರ್ಯಕ್ರಮಗಳ ವಿವರ ಮಧ್ಯಾಹ್ನ 2.30 ರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ಸಾ ಸಂಜೆ 6ಗಂಟೆಗೆ ಸಭಾ ಕಾರ್ಯಕ್ರಮ ಸಂಜೆ 7.00 ರಿಂದ ನಮ್ಮ ಕಲಾವಿದೆರ್ ಬೆರ್ರಿ ಇವರಿಂದ ತುಳು ಹಾಸ್ಯಮಯ ನಾಟಕ ಕುಸಲ್ದ […]