ಕಾರ್ಕಳ: ಡಿ. 29 ರಂದು ಬಜಗೋಳಿಯಲ್ಲಿ ಔಷಧಿ ಸಸ್ಯಗಳ ಕ್ಷೇತ್ರೋತ್ಸವ

ಕಾರ್ಕಳ: ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ ಅಡಿಯಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ ಔಷಧಿ ಸಸ್ಯಗಳ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಔಷಧಿ ಸಸ್ಯಗಳ ಕೃಷಿಯ ಅವಶ್ಯಕತೆ ಮತ್ತು ಪ್ರಾಮುಖ್ಯತೆ, ಅಡಿಕೆ ಮತ್ತು ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ಬೆಳೆಯಲು ಸೂಕ್ತವಾದ ಔಷಧಿ ಸಸ್ಯಗಳ […]

ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಸನ್ಮಾನ; ರಾಷ್ಟ್ರ ರಕ್ಷಣಾ ನಿಧಿಗೆ ದೇಣಿಗೆ ಅರ್ಪಣೆ

ಗಣಿತನಗರ : ಬುದ್ದಿವಂತಿಕೆ ನೈತಿಕತೆಯ ಬಳ್ಳಿಯಾಗಿದೆ. ಎಲ್ಲಿಯವರೆಗೆ ನೈತಿಕತೆಯಿಂದ ಕೂಡಿದ ಬುದ್ದಿವಂತಿಕೆ ಇರುವುದಿಲ್ಲವೋ ಅಲ್ಲಿಯ ತನಕ ನಾವು ಯಾರಿಗೂ ಪ್ರಯೋಜನವಾಗುವುದಿಲ್ಲ. ಹೆಣವಾಗುವ ಮುನ್ನಇತರರ ಬಾಳಿಗೆ ನಾವೆಷ್ಟು ಹಣತೆಯನ್ನು ಹಚ್ಚಿದ್ದೇವೆ ಅನ್ನೋದು ಮುಖ್ಯವೇ ವಿನಃ ನಮ್ಮ ಪದವಿ, ಅಂತಸ್ತುಅಲ್ಲಎಂದು ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್‌ ಕಾಲೇಜಿನ ಡೀನ್‌ ಡಾ. ಕೃಷ್ಣ ಪ್ರಸಾದ್‌ ಎಂ.ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದ ಗಣಿತನಗರ ಕ್ರೀಡಾಂಗಣದಲ್ಲಿಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ ಟ್ರಸ್ಟ್ನ ವತಿಯಿಂದ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ ರಾಷ್ಟ್ರೀಯ ಗಣಿತ […]

ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ‘ಜ್ಞಾನಸಂಭ್ರಮ’ಕ್ಕೆ ಚಾಲನೆ

ಗಣಿತ ನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಗಣಿತನಗರ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಸಾಂಸ್ಕೃತಿಕ ಉತ್ಸವ ‘ಜ್ಞಾನ ಸಂಭ್ರಮ -2022’ಅನ್ನು ಹಿರಿಯರಾದ ದೇಜು ಮೈಂದನ್ ಕೊಡವೂರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಯಲ್ಲಿ ನಾಡು, ನುಡಿ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಪರಿಚಯಿಸುವಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಆಟ-ಪಾಠದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ […]

ಕಲ್ಯಾ: ಮಾಲಕಿ ಮನೆಯಲ್ಲಿಲ್ಲದ ವೇಳೆ ಕಳ್ಳತನ; ಕೃತ್ಯವೆಸಗಿದ ಸ್ನೇಹಿತೆಯ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್‌ ಆಂಚನ್‌ ಎಂಬವರ ಮನೆಯಲ್ಲಿ ಡಿಸೆಂಬರ್ 3ರಂದು ಕಳವು ಪ್ರಕರಣ ನಡೆದಿದ್ದು, ಕಳ್ಳರು ಮನೆಯಲ್ಲಿದ್ದ 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್‌ (34) ಹಾಗು ಕಳ್ಳತನಕ್ಕೆ […]

ನವೀನತೆಯನ್ನು ಸ್ವೀಕರಿಸುವ ಮನೋಭಾವ ವಿದ್ಯಾರ್ಥಿಗಳದ್ದಾಗಿರಬೇಕು: ಎ.ಎಸ್.ಎನ್ ಹೆಬ್ಬಾರ್

ಕಾರ್ಕಳ: ವಿದ್ಯಾರ್ಥಿ ಜೀವನ ಕಾಲೇಜಿನಲ್ಲೆ ಮುಗಿಯುವುದಿಲ್ಲ ಬದಲಿಗೆ ಜೀವನದುದ್ದಕ್ಕೂ ನಡೆಯುವಂತದ್ದು. ಹೊಸತನ್ನು ಸ್ವಾಗತಿಸುವ ಮನೋಭಾವ ಇರಬೇಕು. ಕಣ್ಣು–ಕಿವಿಗಳಿಗೆ ಸದಾ ಕಾತುರತೆ ಇರಬೇಕು. ನವೀನತೆಯನ್ನು ಸ್ವೀಕರಿಸುವ ಮನೋಭಾವ ಚೈತನ್ಯವಾಗಿ ಜೀವಂತವಾಗಿದ್ದಾಗ ವ್ಯಕ್ತಿಯು ಯಶಸ್ವಿಯಾಗಲು ಸಾಧ್ಯ ಎಂದು ಹಿರಿಯ ನ್ಯಾಯವಾದಿ ಎ.ಎಸ್.ಎನ್ ಹೆಬ್ಬಾರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಜ್ಞಾನ ಸಂಭ್ರಮ-2022 ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೈದ್ಯರು ಹಾಗೂ ವಕೀಲರ ವೃತ್ತಿಗೆ ನಿವೃತ್ತಿ ಎಂಬುದಿಲ್ಲ. ಕಾಲಕಾಲಕ್ಕೆ ಕಾನೂನು- ಕಾಯಿದೆಗಳು ಬದಲಾಗುತ್ತಿರುತ್ತದೆ. ಹೊಸ-ಹೊಸ ರೋಗಗಳು ಉಲ್ಬಣಿಸಿದಂತೆ […]