ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ದ್ವಿತೀಯ ಹಂತದ ಜ್ಞಾನಸುಧಾ ಪ್ರತಿಭಾ ಪುರಸ್ಕಾರ-2022 ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಲೆಕ್ಕಪರಿಶೋಧಕ ನಿತ್ಯಾನಂದ ಪ್ರಭು ಮಾತನಾಡಿ, ಕಾರ್ಕಳದಲ್ಲಿ ಒಂದು ವಿಶೇಷತೆ ಇದೆ. ಇಲ್ಲಿ ಕಲ್ಲಿನಿಂದ ಕೆತ್ತಿದ ಮೂರ್ತಿಗಳು ದೇಶ-ವಿದೇಶಗಳಿಗೆ ತಲುಪುತ್ತವೆ. ಅದೇ ರೀತಿ ಜ್ಞಾನಸುಧಾ ಕಾಲೇಜಿನಲ್ಲಿ ಪ್ರತಿಯೊಂದು ವಿದ್ಯಾರ್ಥಿಯನ್ನು ಸುಂದರ ಮೂರ್ತಿಯನ್ನಾಗಿಸಿ ದೇಶದ ಮೂಲೆ-ಮೂಲೆಗಳ ಬೇರೆ-ಬೇರೆ ಕ್ಷೇತ್ರಗಳಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿರುವುದು ಕಾರ್ಕಳಕ್ಕೆ ಹೆಮ್ಮೆಯ ಸಂಗತಿ […]
ನಿಟ್ಟೆ: ಜಪಾನಿನ ನಿಡ್ಯಾಕ್-ರೀಡ್ ಕಂಪೆನಿಯ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜಪಾನ್ ನ ನಿಡ್ಯಾಕ್-ರೀಡ್ ಕಾರ್ಪೋರೇಶನ್ ಸಂಸ್ಥೆಯ ಸಹಯೋಗದಲ್ಲಿ ನಿಟ್ಟೆ ಕ್ಯಾಂಪಸ್ ನಲ್ಲಿ ನಿಡ್ಯಾಕ್-ರೀಡ್ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಆರಂಭಿಸಿದೆ. ಮಂಗಳವಾರದಂದು ನಿಡ್ಯಾಕ್-ರೀಡ್ ಸಂಸ್ಥೆಯ ನಿರ್ದೇಶಕ ಹಾಗೂ ಸಿ.ಇ.ಒ ಹಿಡೆಕಾಜು ಯಮಜಕಿ ಅವರು ಗಣ್ಯರ ಸಮ್ಮುಖದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟನೆಗೊಳಿಸಿ ಮಾತನಾಡಿ, ಭಾರತದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾಗಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದೊಂದಿಗೆ ನಿಡ್ಯಾಕ್ ರೀಡ್ ಸಂಸ್ಥೆಯು ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡಿದ್ದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ […]
ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ರಜತ ಪದಕ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್. ಎಸ್. ಜೋಳದ್ ಮತ್ತು ಪ್ರಥಮ ವಿಜ್ಞಾನ ವಿಭಾಗದ ಸ್ತುತಿ.ಎಚ್.ಬಿ. ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿ ರಜಕ ಪದಕವನ್ನು ಪಡೆದು ತೀರ್ಪುಗಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದು, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ […]
ಕಾರ್ಕಳ: ಖಿನ್ನನಾದ ವ್ಯಕ್ತಿ ನೇಣಿಗೆ ಶರಣು

ಕಾರ್ಕಳ: ಇಲ್ಲಿನ ಕೌಡೂರು ಗ್ರಾಮದ ತಡ್ಪೆತೋಟದ ಪ್ರದೀಪ್ ಪೂಜಾರಿ(37) ಎನ್ನುವ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈ-ಪೂನಾದಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಪ್ರದೀಪ್ , ಕಳೆದ ವರ್ಷ ಊರಿಗೆ ಹಿಂತಿರುಗಿ ತಮ್ಮ ಅಣ್ಣ ಉಮೇಶ್ ಪೂಜಾರಿಯವರೊಂದಿಗೆ ವಾಸವಾಗಿದ್ದರು. ಕೊರೋನಾ ಸಮಯದಲ್ಲಿ ಚುಚ್ಚುಮದ್ದು ತೆಗೆದುಕೊಂಡ ಬಳಿಕ ಎಡಕೈನಲ್ಲಿ ನೋವು ಶುರುವಾಗಿದ್ದು ಪ್ರದೀಪ್ ಗೆ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ, ಈ ಕಾರಣಕ್ಕೆ ಮನನೊಂದು ಸೋಮವಾರದಂದು ಮನೆಯ ಪಕ್ಕದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]
ಕಾರ್ಕಳ: ಅಕ್ಟೋಬರ್ 15 ರಂದು ಮೆಸ್ಕಾಂ ಫೋನ್-ಇನ್ ಕಾರ್ಯಕ್ರಮ

ಕಾರ್ಕಳ: ಮೆಸ್ಕಾಂ ಇಲಾಖೆಯ ವತಿಯಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಅನುಕೂಲಕ್ಕಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3.30 ರಿಂದ 4.30 ರವರೆಗೆ ಮೆಸ್ಕಾಂ ಫೋನ್-ಇನ್ ಕಾರ್ಯಕ್ರಮವನ್ನು ಕಾರ್ಕಳ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ. ಗ್ರಾಹಕರು ದೂರವಾಣಿ ಸಂಖ್ಯೆ : 8277882642, 8277882896, 8277882644, 9480833011, 08258-200488 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.