ನಂದಳಿಕೆ: 14 ನೇ ಶತಮಾನದ ನಾಗಭೈರವ ಶಿಲ್ಪ ಪತ್ತೆ

ಉಡುಪಿ: ಇಲ್ಲಿನ ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ಕಾಲದ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ […]

ಅಕ್ಟೋಬರ್ 12 ರಂದು ಹೆಬ್ರಿ ತಾ.ಪಂ ಜಮಾಬಂದಿ ಕಾರ್ಯಕ್ರಮ

ಉಡುಪಿ: ಹೆಬ್ರಿ ತಾಲೂಕು ಪಂಚಾಯತ್‌ನ 2021-22 ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರಗಳ ಜಮಾಬಂದಿ ಕಾರ್ಯಕ್ರಮವು ಅಕ್ಟೋಬರ್ 12 ರಂದು ಬೆಳಗ್ಗೆ 10.30 ಕ್ಕೆ ಹೆಬ್ರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.  

ವಿವಿಧ ಪಂದ್ಯಾಟಗಳಲ್ಲಿ ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಮಣ್‌ ಇದರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್‌ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕಿಯರ ತಂಡ ರನ್ನರ್‌ ಅಪ್‌ ಪ್ರಶಸ್ತಿ ಗಳಿಸಿ ಕೊಂಡಿದೆ. ತಂಡದ ನಾಯಕಿ ಮಾನ್ಯಶ್ರೀಗೆ ಪಂದ್ಯದ ಬೆಸ್ಟ್‌ ಅಟ್ಯಾಕರ್‌ ಪ್ರಶಸ್ತಿ ದೊರಕಿದೆ. ಜೊತೆಗೆ ಮಾನ್ಯಶ್ರೀ, ಖುಷಿ ಶೆಟ್ಟಿ, ಮತ್ತು ವರ್ಷ ಅಥಣಿ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾರೆ. ತಂಡದೊಂದಿಗೆ ಕಾಲೇಜಿನ […]

ಜ್ಞಾನಸುಧಾ ವಿದ್ಯಾರ್ಥಿನಿ ಅರುಂಧತಿ.ಜಿ.ವಿ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ : ಜ್ಞಾನಸುಧಾ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಕು.ಅರುಂಧತಿ.ಜಿ.ವಿ ಇವರು ಶ್ರೀಮೂಕಾಂಬಿಕ ದೇವಳ ಸ್ವತಂತ್ರ ಪ.ಪೂ.ಕಾಲೇಜು ಕೊಲ್ಲೂರು ಇಲ್ಲಿ ನಡೆದ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟದಲ್ಲಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಗಣೇಶ್‌ ವಿ.ಜಿ ಮತ್ತು ಶ್ರೀಮತಿ ವೀಣಾ ದಂಪತಿಗಳ ಪುತ್ರಿ. ರಾಜ್ಯಮಟ್ಟದ ಚೆಸ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ಸಾಧಕ ವಿದ್ಯಾರ್ಥಿಗೆ ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಶುಭಹಾರೈಸಿದ್ದಾರೆ.

ಬಾಸ್ಕೆಟ್‌ ಬಾಲ್‌ ಮತ್ತು ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾ ಪಿಯು ಕಾಲೇಜು ಉಡುಪಿ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಸ್ಕೆಟ್‌ ಬಾಲ್‌ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಗಳಿಸಿ, ಬಾಲಕರ ತಂಡದ ಪ್ರಥಮ ವಿಜ್ಞಾನ ವಿಭಾಗದ ಶಾಶ್ವತ್‌.ಎಂ.ಆರ್‌., ಕೆ.ಗಗನ್‌, ಕಾರ್ತಿಕ್‌ ಕಾಮತ್‌ ಹಾಗೂ ಬಾಲಕಿಯರ ತಂಡದ ಪ್ರಥಮ ವಿಜ್ಞಾನ ವಿಭಾಗದ ಬಾಲಚನ್ನ ವೈನವಿ, ಸಂಜನಾ.ವಿ.ಬೆಸ್ಕೂರ್‌, ದ್ವಿತೀಯ ವಿಜ್ಞಾನ ವಿಭಾಗದ ಸಾನ್ವಿ ಶೆಟ್ಟಿ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಬಾಸ್ಕೆಟ್‌ […]