ಕಾರ್ಕಳ: ಶ್ರೀ ದೇವಕೀ ಕೃಷ್ಣ ರಾವಳನಾಥ ದೇವಸ್ಥಾನದಲ್ಲಿ ಚಂಡಿಕಾಯಾಗ

ಕಾರ್ಕಳ: ತೆಳ್ಳಾರ್ ರಸ್ತೆ ಶ್ರೀ ದೇವಕೀ ಕೃಷ್ಣ ರಾವಳನಾಥ ದೇವಸ್ಥಾನದಲ್ಲಿ ನವರಾತ್ರಿಯ ಪೌರ್ಣಿಮೆಯಂದು ಶ್ರೀ ದೇವರ ಸನ್ನಿಧಿಯಲ್ಲಿ ಚಂಡಿಕಾ ಯಾಗ ನೆರವೇರಿತು. ಧಾರ್ಮಿಕ ಪೂಜಾ ವಿಧಾನಗಳನ್ನು ವೇ. ಮೂ ಸಂದೀಪ್ ಭಟ್ ನೇತೃತ್ವದಲ್ಲಿ ಅರ್ಚಕ ವೃಂದದವರು ನೆಡೆಸಿಕೊಟ್ಟರು. ಪೂಜಾ ಕಾರ್ಯದಲ್ಲಿ ಅನಿತಾ ಮಂಜುನಾಥ ರಾವ್ ದಂಪತಿಗಳು ಸಹಕರಿಸಿದರು. ದೇವಳದ ಅರ್ಚಕ ಗಣಪತಿ ಭಟ್ ಶ್ರೀ ರಾವಳನಾಥ ದೇವರ ಸನ್ನಿಧಿಯಲ್ಲಿ ಸಾನಿಧ್ಯ ಹವನ, ದ್ವಾದಶ ಕಲಶಾಭಿಷೇಕ, ಪಂಚಾಮೃತಾಭಿಷೇಕ ನೆಡೆಸಿ ಬಳಿಕ ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಚಂಡಿಕಾ ಯಾಗದ ಪೂರ್ಣಾಹುತಿ […]

ಕಾರ್ಕಳ: ಹೋಟೆಲ್ ರಾಮ್ ಭರೋಸ ಪುನರಾರಂಭ

ಕಾರ್ಕಳ: ಆನೆಕೆರೆಯ ಶ್ರೀ ಕೃಷ್ಣ ದೇವಸ್ಥಾನದ ಜಂಕ್ಸನ್ ಬಳಿ 55ವರ್ಷ ಇತಿಹಾಸವುಳ್ಳ ಹೋಟೆಲ್ ರಾಮ್ ಭರೋಸ ನವೀಕೃತಗೊಂಡು ನವರಾತ್ರಿಯ ಪ್ರಾರಂಭದಂದು ಶುಭರಾಂಭಗೊಂಡಿದೆ. ಕಾರ್ಕಳದ ಶಿವ ಎಡ್ವಟೈಸರ್ಸ್ ಮಾಲಕ ವರದರಾಯ ಪ್ರಭು ದೀಪ ಬೆಳಗಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ವೇದಮೂರ್ತಿ ಗಣಪತಿ ಭಟ್, ವಿಠಲ್ ದೇವಾಡಿಗ, ಕುಚೇಲ, ಸುರೇಂದ್ರ ಉಪಸ್ಥಿತರಿದ್ದು ಶುಭಹಾರೈಸಿದರು. ಮಾಲಕ ಅನಂತ ಪ್ರಭು ಸ್ವಾಗತಿಸಿದರು. ಮಂಜುಳ ಪ್ರಭು ದನ್ಯವಾದ ಅರ್ಪಿಸಿದರು.

ಕಾರ್ಕಳ: ಐಟಿ ಉದ್ಯೋಗಿ ನೇಣಿಗೆ ಶರಣು

ಕಾರ್ಕಳ: ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿರುವ ತಾಲೂಕಿನ ಕಲ್ಲೊಟ್ಟೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದು, ಸೋಮವಾರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ […]

ಕಾರ್ಕಳ: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಚಿರತೆ ಸಾವು

ಕಾರ್ಕಳ: ಕಾಡಿನ ಮಧ್ಯದಿಂದ ಹಠಾತ್ತನೆ ಚಿರತೆಯೊಂದು ರಸ್ತೆಗೆ ನುಗ್ಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆ ಪರಿಣಾಮ ಸಾವನಪ್ಪಿದೆ. ಘಟನೆಯು ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರ್ಕಳದಿಂದ ಮುದ್ರಾಡಿ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ರಸ್ತೆ ಕಡೆಗೆ ಹಠಾತ್ತಾಗಿ ನುಗ್ಗಿದ ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ […]

ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಅವಕಾಶ

ಉಡುಪಿ: ಜಿಲ್ಲೆಯ ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕುಗಳನ್ನು ಸರ್ಕಾರದ ಆದೇಶದಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಆಧಿನಿಯಮದ ವಿಧಿ 3(4) ರಡಿ ನೀಡಿದ ಅಧಿಕಾರದನ್ವಯ 2022-2023 ರ ಮಾಸ್ಟರ್ ಸುತ್ತೋಲೆಯ ಅಧ್ಯಾಯ 4.2.3 ರ ಅನ್ವಯ ಬರಪೀಡಿತ ತಾಲೂಕುಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಹೆಚ್ಚುವರಿಯಾಗಿ 50 ದಿನಗಳ ಅಂದರೆ ಒಟ್ಟು 150 ದಿನಗಳ ಉದ್ಯೋಗ […]